Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಗ್ನಿವೀರರು ಅರೆಮಿಲಿಟರಿ ಪಡೆಗಳಿಗೆ...

ಅಗ್ನಿವೀರರು ಅರೆಮಿಲಿಟರಿ ಪಡೆಗಳಿಗೆ ಸೇರಲು ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು: ಕೇಂದ್ರ ಗೃಹ ಸಚಿವಾಲಯದ ಅಧಿಸೂಚನೆ

7 April 2023 9:26 PM IST
share
ಅಗ್ನಿವೀರರು ಅರೆಮಿಲಿಟರಿ ಪಡೆಗಳಿಗೆ ಸೇರಲು ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು: ಕೇಂದ್ರ ಗೃಹ ಸಚಿವಾಲಯದ ಅಧಿಸೂಚನೆ

ಹೊಸದಿಲ್ಲಿ,ಎ.7: ಅಗ್ನಿವೀರರನ್ನು ಅರೆಮಿಲಿಟರಿ ಪಡೆಗಳು ಅಥವಾ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF)ಗಳಲ್ಲಿ ಭರ್ತಿ ಮಾಡಿಕೊಳ್ಳುವ ಮುನ್ನ ಅವರು ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕಿದೆ. ಗುರುವಾರ ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯು ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ತಿದ್ದುಪಡಿಗೊಳಿಸಿದ ನಿಯಮಗಳನ್ನು ಅಧಿಸೂಚಿಸಿದ್ದು ಈ ವಿಷಯವನ್ನು ಮೊದಲ ಬಾರಿಗೆ ಸ್ಪಷ್ಟಪಡಿಸಲಾಗಿದೆ. ಅಗ್ನಿವೀರರಿಗೆ ಸಶಸ್ತ್ರ ಪಡೆಗಳಿಂದ ನಿವೃತ್ತಿಯ ಬಳಿಕ ಸಿಎಪಿಎಫ್‌ಗಳಲ್ಲಿ ಶೇ.10ರಷ್ಟು ಮೀಸಲಾತಿಯನ್ನು ಒದಗಿಸುವುದಾಗಿ ಸರಕಾರವು ಭರವಸೆಯನ್ನು ನೀಡಿತ್ತು.

2010ರ ಅಧಿಸೂಚನೆಯ ಬದಲಾಗಿ ಈ ನಿಯಮಗಳನ್ನು ತರಲಾಗಿದೆ. ಗೃಹ ಸಚಿವಾಲಯವು ಮೊದಲೇ ಘೋಷಿಸಿದಂತೆ ಹೊಸ ಅಧಿಸೂಚನೆಯ ಪ್ರಕಾರ ಅಗ್ನಿವೀರರು ದೈಹಿಕ ಕ್ಷಮತೆ ಪರೀಕ್ಷೆಯಿಂದ ವಿನಾಯಿತಿಯನ್ನು ಮತ್ತು ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಪಡೆಯಲಿದ್ದಾರೆ. ಮೊದಲ ತಂಡದ ಅಗ್ನಿವೀರರು ಐದು ವರ್ಷಗಳ ಸಡಿಲಿಕೆಯನ್ನು ಪಡೆಯಲಿದ್ದಾರೆ.

ಈ ನಿಯಮಗಳು ಹಾಲಿ ಅಸ್ತಿತ್ವದಲ್ಲಿರುವ ಇತರ ವರ್ಗಗಳ (ಎಸ್‌ಸಿ/ಎಸ್‌ಟಿಗಳು,ಒಬಿಸಿಗಳು,ಮಾಜಿ ಯೋಧರು ಇತ್ಯಾದಿ) ಮೀಸಲಾತಿಯ ಮೇಲೆ ಯಾವುದೇ ಪರಿಣಾಮವನ್ನು ಬೀರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಶಸ್ತ್ರ ಪಡೆಗಳು ಜಾತಿಯಾಧಾರಿತ ನೇಮಕಾತಿಗಳನ್ನು ಮಾಡಿಕೊಳ್ಳುವುದಿಲ್ಲ,ಆದರೆ ಸಿಎಪಿಎಫ್‌ಗಳಲ್ಲಿ ಅಸ್ತಿತ್ವದಲ್ಲಿರುವ ಮೀಸಲಾತಿ ವ್ಯವಸ್ಥೆಗೆ ಅನುಗುಣವಾಗಿ ನೇಮಕಾತಿಗಳನ್ನು ಮಾಡಿಕೊಳ್ಳಲಾಗುತ್ತದೆ ಮತ್ತು ಅದು ಸರ್ವೋಚ್ಚ ನ್ಯಾಯಾಲಯವು ನಿಗದಿಗೊಳಿಸಿರುವ ಶೇ.50ರ ಮಿತಿಯನ್ನು ಮೀರುವಂತಿಲ್ಲ.

ನೇರ ನೇಮಕಾತಿಗಳಿಗಾಗಿ 18ರಿಂದ 23 ವರ್ಷ ವಯೋಮಿತಿಯಾಗಿರುತ್ತದೆ. ಎಸ್‌ಸಿ/ಎಸ್‌ಟಿಗಳಿಗೆ ಐದು ವರ್ಷಗಳ ಮತ್ತು ಒಬಿಸಿಗಳಿಗೆ ಮೂರು ವರ್ಷಗಳ ಸಡಿಲಿಕೆಯಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ದೈಹಿಕ ಮತ್ತು ವೈದ್ಯಕೀಯ ಮಾನದಂಡ

ಅಧಿಸೂಚನೆಯ ಪ್ರಕಾರ ಮಾಜಿ ಅಗ್ನಿವೀರರು ಸೇರಿದಂತೆ ಎಲ್ಲ ಅಭ್ಯರ್ಥಿಗಳು ಮ್ಯಾಟ್ರಿಕ್ಯುಲೇಷನ್‌ನ ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆಯನ್ನು ಹೊಂದಿರುವುದು ಅಗತ್ಯವಾಗಿದೆ ಹಾಗೂ ಕೇಂದ್ರ ಸರಕಾರವು ಕಾಲಕಾಲಕ್ಕೆ ಸೂಚಿಸುವ ಯೋಜನೆಯಂತೆ ದೈಹಿಕ ಮತ್ತು ವೈದ್ಯಕೀಯ ಮಾನದಂಡಗಳು ಅನ್ವಯಿಸುತ್ತವೆ. ಮಾಜಿ ಅಗ್ನಿವೀರರು ದೈಹಿಕ ಕ್ಷಮತೆ ಪರೀಕ್ಷೆಯಿಂದ ವಿನಾಯತಿಯನ್ನು ಹೊಂದಿರುತ್ತಾರೆ. ಆದರೆ ಇತರ ಯಾವುದೇ ಅಗತ್ಯದಿಂದ ವಿನಾಯತಿಯನ್ನು ಅದು ನಿರ್ದಿಷ್ಟ ಪಡಿಸಿಲ್ಲ.

ಈವರೆಗೆ ಸಿಐಎಸ್‌ಎಫ್, ಎಸ್‌ಎಸ್‌ಬಿ, ಐಟಿಬಿಪಿ ಮತ್ತು ಬಿಎಸ್‌ಎಫ್ ಕಾನ್‌ಸ್ಟೇಬಲ್ ಹುದ್ದೆಗಳಿಗಾಗಿ ನೇಮಕಾತಿ ನಿಯಮಗಳನ್ನು ಅಧಿಸೂಚಿಸಿದ್ದು ಅಗ್ನಿವೀರರಿಗೆ ಮೀಸಲಾತಿಯನ್ನು ಉಲ್ಲೇಖಿಸಿವೆ,ಆದರೆ ವಿವರಗಳನ್ನು ನಿರ್ದಿಷ್ಟಗೊಳಿಸಿಲ್ಲ. ಸಿಆರ್‌ಪಿಎಫ್ ನಿಯಮಗಳು ವಿವರಗಳನ್ನು ಒದಗಿಸಿವೆ ಮತ್ತು ಇತರ ಎಲ್ಲ ಸಿಎಪಿಎಫ್‌ಗಳಿಗೆ ಮಾದರಿಯಾಗುವ ಸಾಧ್ಯತೆಯಿದೆ.

share
Next Story
X