ವಿಧಾನ ಸಭಾ ಚುನಾವಣೆ: ದ.ಕ. ಜಿಲ್ಲೆಗೆ ಆಗಮಿಸಿದ ಮೊದಲ ಹಂತದ ಸಿಆರ್‌ಪಿಎಫ್ ತುಕಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದ ಕರ್ತವ್ಯವನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿಆರ್‌ಪಿಎಫ್ ತುಕಡಿಗಳು ಆಗಮಿಸಿವೆ.
ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಮುಖ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಶುಕ್ರವಾರ ಸಂಜೆ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ವಿಕ್ರಂ ಅಮಟೆ ಮಾರ್ಗದರ್ಶನದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರಿಂದ ಪಥ ಸಂಚಲ ನಡೆಯಿತು.
ಸುಳ್ಯ ಪೊಲೀಸ್ ಠಾಣೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ, ಬೆಳ್ತಂಗಡಿ ಪೊಲೀಸ್ ಠಾಣೆ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಗಳ ವ್ಯಾಪ್ತಿಯಲ್ಲಿನ ಸೂಕ್ಷ್ಮ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಸಿಆರ್‌ಪಿಎಫ್ ಸಿಬ್ಬಂದಿಯೊಂದಿಗೆ ಸ್ಥಳೀಯ ಪೊಲೀಸರು ಪಥ ಸಂಚಲನ ನಡೆಸಿ ಮುಂಬರುವ ಚುನಾವಣೆಗೆ ಸಂಬಂಧಿಸಿ ಸೂಕ್ತ ಬಂದ್ ಬಸ್ತ್‌ಗೆ ತಯಾರಿ ನಡೆಸಿದ್ದಾರೆ.