ದ್ವಿತೀಯ ಪಿಯುಸಿ: ಮೌಲ್ಯಮಾಪನಕ್ಕೆ ರಾಜ್ಯಾದ್ಯಂತ 6 ಸಾವಿರ ಉಪನ್ಯಾಸಕರು ಗೈರು

ಬೆಂಗಳೂರು, ಎ.7: ರಾಜ್ಯಾದ್ಯಂತ 65 ಕೇಂದ್ರಗಳಲ್ಲಿ 20 ದಿನಗಳ ಕಾಲ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು, ಮೌಲ್ಯಮಾಪನಕ್ಕೆ 6 ಸಾವಿರ ಉಪನ್ಯಾಸಕರು ಗೈರಾಗಿದ್ದಾರೆ ಎಂದು ವರದಿಯಾಗಿದೆ.
ಮಾ.9 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಎ.5 ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಗೊಂಡಿದೆ. 20 ದಿನಗಳ ಕಾಲ ನಡೆಯಲಿರುವ ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಸುತ್ತಿದ್ದಾರೆ.
ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಉಪನ್ಯಾಸಕರನ್ನು ಚುನಾವಣಾ ಕರ್ತವ್ಯಕ್ಕೂ ಬಳಸಿಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮೌಲ್ಯಮಾಪಕರ ಸಂಖ್ಯೆ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಶೇ.20ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಉಪನ್ಯಾಸಕರು ಗೈರಾಗಿದ್ದಾರೆ.
Next Story