ಪ್ರಧಾನಿ ಮೋದಿ ಹೈದರಾಬಾದ್‌ಗೆ ಭೇಟಿ ನೀಡುವ ಮುನ್ನ ತೆಲಂಗಾಣ ಕಾಂಗ್ರೆಸ್‌ನ ಹಲವು ನಾಯಕರು ಪೊಲೀಸ್ ವಶಕ್ಕೆ

ಹೈದರಾಬಾದ್: ತೆಲಂಗಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್‌ನ ಹಲವು ಮುಖಂಡರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನ್ಯಾಶನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಅಧ್ಯಕ್ಷ ಬಲಮುರಿ ವೆಂಕಟ್, ಯುವ ಕಾಂಗ್ರೆಸ್ ಅಧ್ಯಕ್ಷ ಶಿವಸೇನಾ ರೆಡ್ಡಿ, ದಲಿತ ಕಾಂಗ್ರೆಸ್ ಅಧ್ಯಕ್ಷ ಪ್ರೀತಮ್ ಹಾಗೂ ಇತರರನ್ನು ವಶಕ್ಕೆ ಪಡೆಯಲಾಗಿದೆ.
ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಚಾಲನೆಯ ಜೊತೆಗೆ ತೆಲಂಗಾಣದಲ್ಲಿ 11,300 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೈದರಾಬಾದ್‌ಗೆ ಭೇಟಿ ನೀಡಲಿದ್ದಾರೆ.
ಸಿಕಂದರಾಬಾದ್‌ನ ಪರೇಡ್ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Next Story





