ರಾಜ್ಯದಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮದಿಂದ ಹೊರಗುಳಿಯಲಿದ್ದಾರೆ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (K Chandrashekar Rao )ಅವರು ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಿಂದ ಹೊರಗುಳಿಯಲಿದ್ದು,ಪ್ರಧಾನಿ ಅವರು ಚುನಾವಣೆ ಎದುರಿಸುತ್ತಿರುವ ತೆಲಂಗಾಣ ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಮುಖ್ಯಮಂತ್ರಿ ಕೆಸಿಆರ್ ಅವರನ್ನು ಪ್ರೋಟೋಕಾಲ್ ಪ್ರಕಾರ ಆಹ್ವಾನಿಸಲಾಗಿದೆ. ಶನಿವಾರದಂದು ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಕೆಸಿಆರ್ ಬರಮಾಡಿಕೊಳ್ಳುವುದಿಲ್ಲ.
ಕೆಸಿಆರ್ ಅವರ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ತೆಲಂಗಾಣದಲ್ಲಿ ರಾಜಕೀಯವಾಗಿ ನೆಲ ಕಾಣಲು ಪ್ರಯತ್ನಿಸುತ್ತಿರುವ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿದೆ. ರಾಜ್ಯದಲ್ಲಿ ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.
ಮತ್ತೊಂದೆಡೆ, ಕೆಸಿಆರ್ ತನ್ನ ರಾಷ್ಟ್ರೀಯ ಮಹತ್ವಾಕಾಂಕ್ಷೆಯ ಭಾಗವಾಗಿ ತನ್ನ ಪಕ್ಷವನ್ನು ಇತರ ರಾಜ್ಯಗಳಿಗೆ ವಿಸ್ತರಿಸಲು ಪ್ರಯತ್ನಿಸುತ್ತಿದ್ದಾರೆ.
Next Story





