ದಾವಣಗೆರೆ | ತಾಯಿ-ಮಗಳ ಮೇಲೆ ಕಾಡಾನೆ ದಾಳಿ: ಬಾಲಕಿ ಮೃತ್ಯು

ದಾವಣಗೆರೆ, ಎ.8: ಕಾಡಾನೆ ದಾಳಿಗೆ ಸಿಲುಕಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೋಮ್ಲಾಪುರ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಕವನಾ (17) ಎಂದು ಗುರುತಿಸಲಾಗಿದೆ. ಆನೆ ದಾಳಿಯಿಂದ ಕವನಾ ಅವರ ತಾಯಿ ಮಂಜುಳಾ (42) ಕೂಡಾ ಗಂಭೀರ ಗಾಯಗೊಂಡಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ ಮಂಜುಳಾ ಮತ್ತು ಮಗಳು ಕವನಾ ಜಮೀನಿನಲ್ಲಿ ಅವರೆಕಾಯಿ ಬಿಡಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಅವರೆಕಾಯಿ ಬಿಡಿಸುವುದರಲ್ಲಿ ಮಗ್ಗರಾಗಿದ್ದ ವೇಳೆ ಕಾಡಾನೆ ಏಕಾಏಕಿ ಹಿಂದಿನಿಂದ ದಾಳಿ ಮಾಡಿದೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ಕವನಾರ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
ಚನ್ನಗಿರಿ ತಾಲೂಕಿನ ಸೋಮ್ಲಾಪುರ ಹಾಗೂ ಕಾಶಿಪುರ ಸುತ್ತಮುತ್ತ ಕಾಡಾನೆ ಹಾವಳಿ ತೀವ್ರವಾಗಿದ್ದು, ಇದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Next Story






.gif)
.gif)

