Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸುದೀಪ್‍ಗೆ ಅವಮಾನ ಮಾಡಿದ ಕಾಂಗ್ರೆಸ್,...

ಸುದೀಪ್‍ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್‍ಗೆ ಪ್ರಜ್ಞಾವಂತ ಜನರಿಂದ ತಕ್ಕ ಉತ್ತರ: ಗೌರವ್ ಭಾಟಿಯಾ

8 April 2023 9:31 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸುದೀಪ್‍ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್‍ಗೆ ಪ್ರಜ್ಞಾವಂತ ಜನರಿಂದ ತಕ್ಕ ಉತ್ತರ: ಗೌರವ್ ಭಾಟಿಯಾ

ಬೆಂಗಳೂರು: ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ನಿಲುವನ್ನು ಪ್ರಶ್ನಿಸುವ ಮತ್ತು ಅವರನ್ನು ಅವಮಾನಿಸುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡಿದ ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ಪ್ರಜ್ಞಾವಂತ ಜನತೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು ವಿಶ್ವಾಸದಿಂದ ನುಡಿದರು.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಪಕ್ಷದ ಮುಖಂಡರು ತಮ್ಮ ಮೂಗಿನ ನೇರಕ್ಕೆ ಮಾತನಾಡುತ್ತಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ತಮಗೆ ಬೇಕಾದಂತೆ ವಿಶ್ಲೇಷಿಸಿ ಬಳಸುತ್ತಾರೆ ಎಂದು ಟೀಕಿಸಿದರು.

ಕಿಚ್ಚ ಸುದೀಪ್ ಅವರು ಪ್ರಜಾಸತ್ತೆಯ ಸ್ವಾತಂತ್ರ್ಯದ ಆಧಾರದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಮತ್ತು ಬಿಜೆಪಿ ಬೆಂಬಲಿಸುವ ನಿರ್ಣಯ ತೆಗೆದುಕೊಂಡಿದ್ದಾರೆ. ಆದರೆ, ಇವೆರಡು ಪಕ್ಷಗಳು ಕಿಚ್ಚ ಸುದೀಪ್ ವಿರುದ್ಧಟೀಕೆ ಮಾಡುತ್ತಿವೆ. ವಿವಿಧ ಏಜೆನ್ಸಿಗಳಿಂದ ತನಿಖೆ ತಪ್ಪಿಸಿಕೊಳ್ಳಲು ಹೀಗೆ ಮಾಡಿದ್ದಾಗಿ ಟೀಕಿಸುತ್ತಿವೆ ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಸಮರ್ಥನೆ ಮಾಡುವವರಾದರೆ ಅದು ಪ್ರಜಾಸತ್ತೆಗೆ ಪೂರಕ ಎನ್ನುವ ನಿಲುವು ಆ ಪಕ್ಷದ ಮುಖಂಡರದು. ಬಿಜೆಪಿಯಲ್ಲಿ ಪ್ರಚಾರಕ್ಕೆ ಹೊರಗಿನ ಅಗತ್ಯವಿದೆ ಎಂದು ಆಕ್ಷೇಪಿಸಿದ್ದಾರೆ. ಇದು ಸರಿಯಲ್ಲ ಎಂದು ತಿಳಿಸಿದರು.

ಭಾರತ್ ಜೋಡೋ ಹೆಸರಿನ ಭಾರತ್ ತೋಡೋ ಯಾತ್ರೆ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜೊತೆ ದೇಶದ್ರೋಹಿಗಳು, ತುಕ್ಡೇ ತುಕ್ಡೇ ಗ್ಯಾಂಗಿನವರು ಹೆಜ್ಜೆ ಹಾಕಿದ್ದರು. ರಾಹುಲ್ ಗಾಂಧಿಯವರಿಗೆ ಜನಪ್ರಿಯತೆ ಇಲ್ಲದ ಕಾರಣ ಸ್ವರಾ ಭಾಸ್ಕರ್ ಅವರಂಥವರು ಬೇಕಾಯಿತೇ ಎಂದು ಪ್ರಶ್ನಸಿದರು. ದೇಶದ ವಿರುದ್ಧ ಘೋಷಣೆ ಕೂಗುವವರು ಅವರಿಗೆ ಬೇಕಾಯಿತು ಎಂದು ಆರೋಪಿಸಿದರು.

ಕಾಂಗ್ರೆಸ್- ಜೆಡಿಎಸ್‍ನದು ಅನಾರೋಗ್ಯದ ಮನಸ್ಥಿತಿ, ಬೂಟಾಟಿಕೆ ಎಂದು ಟೀಕಿಸಿದ ಅವರು, ಕಿಚ್ಚ ಸುದೀಪ್ ಅವರು ಪರಿಶ್ರಮದಿಂದ ಸ್ವತಃ ಜನರ ನಡುವೆ ಬೆಳೆದು ಅಪಾರ ಜನಪ್ರಿಯತೆ ಗಳಿಸಿದವರು. ರಾಹುಲ್ ಗಾಂಧಿಯಂತೆ ಕುಟುಂಬದ ಆಧಾರದಲ್ಲಿ ಬಂದವರಲ್ಲ. ಈ ಬುಡಕಟ್ಟು ಸಮಾಜದವರನ್ನು ಟೀಕಿಸುತ್ತಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನವಲ್ಲವೇ? ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿ ವಿದೇಶದಲ್ಲಿ ಭಾರತದ ಪ್ರಜಾಪ್ರಭುತ್ವದ ವಿರುದ್ಧ ಮಾತನಾಡಿದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಕಾಂಗ್ರೆಸ್ ಹೇಳುತ್ತದೆ. ಆದರೆ, ಕಿಚ್ಚ ಸುದೀಪ್ ಅವರಂಥ ಸಿನಿತಾರೆ ತಮ್ಮ ಬೆಂಬಲವನ್ನು ಯಾರಿಗೆ ಕೊಡಬೇಕೆಂದು ಆಯ್ಕೆ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಅಲ್ಲವೇ? ಎಂದು ಕೇಳಿದರು. ಬಿಜೆಪಿ ರಾಷ್ಟ್ರಪತಿ ಸ್ಥಾನವನ್ನು ಬುಡುಕಟ್ಟು ಸಮುದಾಯಕ್ಕೆ ಕೊಟ್ಟಿದೆ ಎಂದು ನೆನಪಿಸಿದರು.

ಡಿ.ಕೆ.ಶಿವಕುಮಾರ್, ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ತಮಗೆ ಬೆಂಬಲ ಕೊಡಲು ಕೋರಿದ್ದರು ಎಂಬ ಮಾಹಿತಿ ಇದೆ ಎಂದ ಅವರು, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರಕ್ಕೆ ಮತ್ತು ಕುಟುಂಬ ರಾಜಕೀಯಕ್ಕೆ ಸ್ಪಷ್ಟ ಉದಾಹರಣೆ ಎಂದು ತಿಳಿಸಿದರು.

ಕರ್ನಾಟಕದ ಜನತೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಕಡೆ ಆದ್ಯತೆ ಕೊಟ್ಟ ಬಿಜೆಪಿಯ ಕಡೆ ಒಲವು ತೋರುತ್ತಿದ್ದಾರೆ. ದುರ್ಬಲ ಸಮುದಾಯಕ್ಕೆ ಒಳ ಮೀಸಲಾತಿ ಕೊಟ್ಟ ಸರಕಾರ ನಮ್ಮ ಬಿಜೆಪಿಯದು. ಕಿಚ್ಚ ಸುದೀಪ್ ಅವರ ಬೆಂಬಲದಿಂದ ಕಾಂಗ್ರೆಸ್ -ಜೆಡಿಎಸ್ ಇನ್ನಷ್ಟು ದುರ್ಬಲವಾಗುವ ಆತಂಕ ಅವೆರಡು ಪಕ್ಷದವರಲ್ಲಿದೆ. ಅವರ ವಿರುದ್ಧ ಮಾಡಿದ ಟೀಕೆ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ತಿಳಿಸಿದರು.

ಜನಪ್ರಿಯ ವ್ಯಕ್ತಿಯೊಬ್ಬರು ನಿರ್ದಿಷ್ಟ ತತ್ವ, ಸಿದ್ಧಾಂತವನ್ನು ಬೆಂಬಲಿಸಬಾರದು ಎಂದಿಲ್ಲ. ಕಾಂಗ್ರೆಸ್‍ನವರು ಚುನಾವಣಾ ನೀತಿ ಸಂಹಿತೆಯನ್ನು ಇನ್ನೊಮ್ಮೆ ಅಭ್ಯಸಿಸಲಿ ಎಂದು ಕಿವಿಮಾತು ಹೇಳಿದರು.

ದೇಶವಿರೋಧಿಗಳು, ಟುಕ್ಡೇ ಟುಕ್ಡೇ ಗ್ಯಾಂಗ್ ಜೊತೆ ಇರುವ ವ್ಯಕ್ತಿಗಳು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಾರೆ ಎಂದು ಟೀಕಿಸಿದ ಅವರು, ಕರ್ನಾಟಕದ ಕುವರ ಬಿಜೆಪಿ ಬೆಂಬಲಿಸಿದರೆ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಆತಂಕ ಯಾಕೆ? ಕಾಂಗ್ರೆಸ್ ಜೆಡಿಎಸ್ ವಿನಾಶ ಸನ್ನಿಹಿತ.ವಾಗಿದೆ. ಇವೆರಡು ಪಕ್ಷಗಳಿಗೆ ಪ್ರಜ್ಞಾವಂತ ಜನತೆ ಸಮರ್ಥ ಉತ್ತರವನ್ನು ನೀಡಲಿದ್ದಾರೆ ಎಂದು ನುಡಿದರು.

ಈ ಚುನಾವಣಾ ಸಮರ ರಾಷ್ಟ್ರಹಿತ ವಿಚಾರಧಾರೆಯ ಆಧಾರದಲ್ಲಿ ಮುಂದುವರಿಯಲಿದೆ ಎಂದು ಅವರು ತಿಳಿಸಿದರು. ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಮತ್ತು  ರಾಜ್ಯ ಹಾಲು ಉತ್ಪಾದಕರ ಪ್ರಕೋಷ್ಠದ ರಾಜ್ಯ ಸಂಚಾಲಕ ವೆಂಕಟೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X