ನಟಿ ಶೃತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್

ಬೆಂಗಳೂರು: ಭಾಷಣದ ವೇಳೆ ನಟಿ ಶೃತಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದಲ್ಲಿ ಭಾಷಣ ಮಾಡುವ ಸಂಧರ್ಭದಲ್ಲಿ ''ನಿಮ್ಮ ವಂಶ ಬಿಟ್ಟು ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್ ಗೆ ಮತ ಹಾಕಿ, ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್ಗೆ ಮತ ನೀಡಿ. ದೇಶದ ವಂಶ ಬೆಳೆಯಬೇಕು ಎಂದರೆ ಬಿಜೆಪಿಗೆ ಮತ ನೀಡಿ'' ಎಂದು ನಟಿ ಶೃತಿ ಹೇಳಿಕೆ ನೀಡಿದ್ದರು.
ಈ ರೀತಿಯಾದ ನಟಿ ಶೃತಿ ಪ್ರಚೋದನಕಾರಿ ಭಾಷಣ ಮಾಡಿ ಮತದಾರರನ್ನು ಒಲಿಸಿಕೊಳ್ಳುವ ಯತ್ನ ಮಾಡಿದ್ದಾರೆ . ಅವರ ಈ ಹೇಳಿಕೆ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಅವರ ಮೇಲೆ ಕ್ರಮ ತೆಗದುಕೊಳ್ಳಿ ಎಂದು ದೂರಿನಲ್ಲಿ ಜೆಡಿಎಸ್ ಆಗ್ರಹಿಸಿದೆ.

Next Story





