Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೈಜ್ಞಾನಿಕ ಮನೋಭಾವನೆ ಬೆಳೆಸಲು...

ವೈಜ್ಞಾನಿಕ ಮನೋಭಾವನೆ ಬೆಳೆಸಲು ದೇಶಾದ್ಯಂತ ಪ್ರವಾಸ: ಹರಿಂದರ್ ಲಾಲಿ

8 April 2023 6:40 PM IST
share
ವೈಜ್ಞಾನಿಕ ಮನೋಭಾವನೆ ಬೆಳೆಸಲು ದೇಶಾದ್ಯಂತ ಪ್ರವಾಸ: ಹರಿಂದರ್ ಲಾಲಿ

ಮಂಗಳೂರು: ಪ್ರಸಕ್ತ ಕಾಲಘಟ್ಟದಲ್ಲಿ ನಮ್ಮನ್ನಾಳುವ ಸರಕಾರಗಳು ದೇಶದ ಸಂವಿಧಾನದ ಆಶಯಗಳ ಲ್ಲೊಂದಾದ ಆರ್ಟಿಕಲ್ 51ಎ (ಎಚ್) ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯಕ್ರಮಗಳನ್ನು ಉತ್ತೇಜಿಸುವ ಬದಲಾಗಿ ಮೂಢನಂಬಿಕೆಗಳನ್ನೇ ದೇಶದ ಸಂವಿಧಾನದ ಎಲ್ಲಾ ಆಶಯಗಳನ್ನೇ ಬುಡಮೇಲು ಮಾಡಲು ಹೊರಟಿವೆ. ಇಂತಹ ಸಂದಿಗ್ಧ ವಿದ್ಯಮಾನದಲ್ಲಿ ದೇಶದ ಜನರನ್ನು ಮೂಢನಂಬಿಕೆಯಿಂದ ಹೊರತರುವ, ವೈಜ್ಞಾನಿಕ ಚಿಂತನೆ ಬೆಳೆಸುವ ನಿಟ್ಟಿನಲ್ಲಿ ದೇಶದಾದ್ಯಂತ ಪ್ರವಾಸಕೈಗೊಂಡಿದ್ದೇವೆ ಎಂದು ವಿಚಾರವಾದಿ, ನ್ಯಾಯವಾದಿ ಹರಿಂದರ್ ಲಾಲಿ ಹೇಳಿದ್ದಾರೆ.

ವೈಜ್ಞಾನಿಕ ಚಿಂತನೆಗಳನ್ನು ಹರಡಲು ಭಾರತ, ನೇಪಾಳ, ಭೂತಾನ್ ದೇಶಾದ್ಯಂತ ಪ್ರವಾಸ ಕೈಗೊಂಡಿರುವ ವಿಚಾರವಾದಿ ಹರಿಂದರ್ ಲಾಲಿ ಮತ್ತವರ ಬಳಗದ ಡಾ. ರಾಜಾರಾಮ್, ಡಾ. ರಾಜೇಶ್ ಅವರೊಂದಿಗೆ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಅವರು ಶುಕ್ರವಾರ ನಗರದ ವಿಕಾಸದಲ್ಲಿ ಸಮಾನ ಮನಸ್ಕರೊಂದಿಗೆ ಆಯೋಜಿಸಿದ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿಚಾರವಾದಿ ಡಾ. ರಾಜಾರಾಮ್ ಮಾತನಾಡುತ್ತಾ ದೇಶಾದ್ಯಂತ ನಡೆಯುವ ಚುನಾವಣೆಯಲ್ಲಿ ಆಯಾ ರಾಜ್ಯದ ಮಠಾಧೀಶರು, ಸ್ವಾಮೀಜಿಗಳು ಧರ್ಮ ಮತ್ತು ಜಾತಿಯ ಆಧಾರದಲ್ಲಿ ರಾಜಕಾರಣ ನಡೆಸುತ್ತಾರೆ. ಮೂಢನಂಬಿಕೆಗಳನ್ನು ಪೋಷಿಸುತ್ತಾರೆ. ಭ್ರಷ್ಟಾಚಾರ ನಡೆಸುವ ರಾಜಕೀಯ ಪಕ್ಷಗಳು, ರಾಜಕಾರಣಿಗಳನ್ನು ಆಯ್ಕೆ ಮಾಡಿಕೊಳ್ಳಲು ಪ್ರಚೋದಿಸುತ್ತಾರೆ. ದೇವರ ಹೆಸರಲ್ಲಿ ದುಡ್ಡಿನ ದಂಧೆ ನಡೆಸುವ ಇಂತಹ ಕಪಟ ಮಠಾಧೀಶರ ವಿರುದ್ಧ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಧರ್ಮದ ಹೆಸರಲ್ಲಿ ಅನಾಚಾರ, ಅತ್ಯಾಚಾರ ನಡೆಸಿ ಜೈಲು ಪಾಲಾದ ಪಂಜಾಬಿನ ಸಂತ ಎಂದು ಕರೆಸಿಕೊಂಡ ಗುರ್ಮೀತ್ ರಾಮ್ ರಹಿಮ್ ವಿರುದ್ಧ ಹೋರಾಟ ನಡೆಸಿದ ನನ್ನ ಮೇಲೆ ಹಲವು ಬಾರಿ ಕೊಲೆಯತ್ನ ನಡೆದಿದೆ. ಪ್ರಮುಖ ಸಾಕ್ಷಿದಾರನಾಗಿದ್ದ ನನ್ನನ್ನು ಮುಗಿಸಲು ನಡೆಸಿದ ಪ್ರಯತ್ನದಿಂದ ನಾನೇನು ಕಂಗೆಡಲಿಲ್ಲ. ಇಂತಹ ಬಲಾಢ್ಯರನ್ನು ಬಗ್ಗು ಬಡಿಯಲು ಧೈರ್ಯದಿಂದ ಮುನ್ನಡೆಯಬೇಕು ಎಂದು ಡಾ. ರಾಜಾರಾಮ್ ಹೇಳಿದರು.

ಪ್ರೊ.ರಾಜೇಂದ್ರ ಉಡುಪ, ದಲಿತ ಸಂಘಟನೆಯ ಮುಖಂಡ ಎಂ.ದೇವದಾಸ್, ಮಾನವತಾವಾದಿ ಸಂಘಟನೆಯ ಡಾ. ಕೃಷ್ಣಪ್ಪ ಕೊಂಚಾಡಿ, ಲೇಖಕ ಟಿ.ಆರ್. ಭಟ್, ಹಿರಿಯ ಕಲಾವಿದ ಪ್ರಭಾಕರ್ ಕಾಪಿಕಾಡ್, ಡಿವೈಎಫ್‌ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮೈಕಲ್ ಡಿಸೋಜ, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಸಮುದಾಯದ ವಾಸುದೇವ ಉಚ್ಚಿಲ, ಎಐವೈಎಫ್ ಪುಷ್ಪರಾಜ್ ಬೋಳೂರು, ಕರುಣಾಕರ್, ಜಗತ್ಪಾಲ್, ಎಸ್‌ಎಫ್‌ಐ ದ.ಕ. ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ಪ್ರಮೀಳಾ ಶಕ್ತಿನಗರ, ಅಸುಂತ ಡಿಸೋಜ, ಮಯೂರ್ ಶೆಟ್ಟಿ ಉಪಸ್ಥಿತರಿದ್ದರು.

share
Next Story
X