ಎ.12ರಂದು ಬಿಎಲ್ ಸಂತೋಷ್ ಉಡುಪಿಗೆ ಭೇಟಿ

ಉಡುಪಿ, ಎ.8: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಎ.12ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಬೆಳಗ್ಗೆ 10ಗಂಟೆಗೆ ಕಾಪು ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗ ಮಟ್ಟದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story