ಮಣಿಪಾಲ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಮಣಿಪಾಲ, ಎ.8: ಬಡಗಬೆಟ್ಟು ಗ್ರಾಮದ ಇಂದಿರಾ ನಗರ ಎಂಬಲ್ಲಿರುವ ಮನೆಯೊಂದಕ್ಕೆ ಎ.7 ರಂದು ಬೆಳಗ್ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಮನೆಗೆ ನುಗ್ಗಿದ ಕಳ್ಳರು ಕಾಪಾಟಿನಲ್ಲಿದ್ದ 44 ಗ್ರಾಂ ತೂಕದ ಚಿನ್ನದ ಕಡಗ, ಎರಡು ಚಿನ್ನದ ಸರಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ 3,30,000ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





