ಬಿಜೆಪಿಯಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್‍ಗೆ ಎಚ್ಚರಿಕೆ ನೀಡಿದ ಪೊಲೀಸರು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್‍ಗೆ ಪೊಲೀಸರು ಎಚ್ಚರಿಕೆ ನೀಡಿ ಸೆಕ್ಷನ್ 110 ಅಡಿ 15 ಲಕ್ಷ ಬಾಂಡ್ ಬರೆಸಿದ್ದಾರೆ ಎಂದು ತಿಳಿದುಬಂದಿದೆ.
ಸೈಲೆಂಟ್ ಸುನೀಲ್ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದಾನೆ. ಇನ್ನೂ, ಚುನಾವಣೆ ಹಿನ್ನೆಲೆ ಇಲ್ಲಿನ ಅಮೃತಹಳ್ಳಿ ಪೊಲೀಸರು ಸಿಆರ್‍ಪಿಸಿ 110 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
Next Story