ಎ.16ರಂದು ಕೋಲಾರಕ್ಕೆ ರಾಹುಲ್ ಗಾಂಧಿ

ಬೆಂಗಳೂರು: ಕೋಲಾರದಲ್ಲಿ ನಡೆಯಲಿರುವ ಸತ್ಯಮೇವ ಜಯತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಎಪ್ರಿಲ್ 16ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಮನವಿ ಮೇರೆಗೆ ರಾಹುಲ್ ಗಾಂಧಿ ಅವರು ತಮ್ಮ ಕಾರ್ಯಕ್ರಮವನ್ನು ಒಂದು ವಾರ ಮುಂದೂಡಿದ್ದಾರೆ. ಅವರ ಆಗಮನ ದಿನವೇ ನಾವು ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮವನ್ನು ಸಹ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದರು.
ರಾಹುಲ್ ಗಾಂಧಿಯವರಿಗೆ ನೀಡಿದ ಸಂಸತ್ತು ಹಾಗೂ ನ್ಯಾಯಾಲಯ ನೀಡಿದ ಶಿಕ್ಷೆ ಸರಿಯಲ್ಲ. ಕೋಲಾರದಲ್ಲಿ ಅಂದು ಸಭೆ ನಡೆಸುವ ಮೂಲಕ ಇಡೀ ರಾಜ್ಯಕ್ಕೆ ಒಂದು ಹೊಸ ಶಕ್ತಿ ಕೊಡುವ ಪ್ರಯತ್ನ ಮಾಡಲಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ವಿವರಿಸಿದರು.
Next Story





