ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್.ಚಂದ್ರಪ್ಪ ನೇಮಕ

ಬೆಂಗಳೂರು, ಎ.9: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC) ಕಾರ್ಯಾಧ್ಯಕ್ಷರಾಗಿ ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪರನ್ನು ನೇಮಕಗೊಳಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಆದೇಶಿಸಿದೆ.
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಂದ್ರಪ್ಪರನ್ನು ನೇಮಕ ಮಾಡಿದ್ದು, ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಬಿಡುಗಡೆ ಮಾಡಿರುವ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಈ ಹಿಂದೆ KPCC ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವನಾರಾಯಣ ಅವರು ಇತ್ತೀಚೆಗೆ ನಿಧನರಾಗಿದ್ದರಿಂದ ಆ ಸ್ಥಾನ ತೆರವಾಗಿತ್ತು.
Next Story