ರಾಜ್ಯದಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ

ಬೆಂಗಳೂರು, ಎ.9: ರಾಜ್ಯದ ಕೆಲ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇನ್ನು ಮುಂದಿನ ಎರಡು ದಿನಗಳ ಕಾಲ ಮಳೆ (Rain Rain) ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎ.10ರಂದು ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೆ, ಎ.11ರಂದು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಉತ್ತರ ದಕ್ಷಿಣ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Next Story





