Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸರ್ವಾಧಿಕಾರಿ ಧೋರಣೆಯ ಬಿಜೆಪಿಯನ್ನು...

ಸರ್ವಾಧಿಕಾರಿ ಧೋರಣೆಯ ಬಿಜೆಪಿಯನ್ನು ಸೋಲಿಸಬೇಕಾಗಿದೆ: ಸುನೀಲ್ ಕುಮಾರ್ ಬಜಾಲ್

9 April 2023 6:33 PM IST
share
ಸರ್ವಾಧಿಕಾರಿ ಧೋರಣೆಯ ಬಿಜೆಪಿಯನ್ನು ಸೋಲಿಸಬೇಕಾಗಿದೆ: ಸುನೀಲ್ ಕುಮಾರ್ ಬಜಾಲ್

ಮಂಗಳೂರು: ಕರ್ನಾಟಕದ ಜನಮತಗಣನೆಯನ್ನು ಧಿಕ್ಕರಿಸಿ, ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷದ ಆಡಳಿತದಲ್ಲಿ ಪ್ರಜಾಪ್ತಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿದ  ಸರ್ವಾಧಿಕಾರಿ, ಕೋಮುವಾದಿ ಬಿಜೆಪಿಯನ್ನು ಸೋಲಿಸಬೇಕೆಂದು ಸಿಪಿಐ(ಎಂ) ದ.ಕ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್ ಕರೆ ನೀಡಿದರು.

ಅವರು ಇಂದು ನಗರದ ಎ.ಕೆ.ಜಿ ಭವನದಲ್ಲಿ ಜರುಗಿದ ಸಿಪಿಐಎಂ ಪಕ್ಷದ ಮಂಗಳೂರು ನಗರ ಮಟ್ಟದ ಪ್ರಮುಖ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ ದರು.

ಬಿಜೆಪಿ ಪಕ್ಷದ ಆಡಳಿತದಲ್ಲಿ ಸಂಪೂರ್ಣ ಜನವಿರೋಧಿ ಸರಕಾರ ಆಗಿತ್ತು. ರಾಜ್ಯ ದಲ್ಲಿ ಅದು 40% ಕಮಿಷನ್ ವ್ಯವಹಾರವನ್ನು ನಡೆಸುತ್ತಿರುವ ಸರಕಾರವೆಂಬ ಕುಖ್ಯಾತಿ ಗಳಿಸಿದೆ ಎಂದು ಟೀಕಿಸಿದರು.

ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಾಂ ಕೃಷ್ಣಪ್ಪ ಕೊಂಚಾಡಿ ಮಾತಾಡಿ, ಬಿಜೆಪಿ ಡಬಲ್ ಇಂಜಿನ್ ಸರಕಾರದಡಿಯಲ್ಲಿ ಸಾರ್ವಜನಿಕ ಆಸ್ತಿಗಳನ್ನೆಲ್ಲಾ ಕಾರ್ಪೊರೇಟ್ ಕಂಪೆನಿಗಳಿಗೆ ಮಾರಾಟ ಮಾಡುವ ಮೂಲಕ  ಅಗರ್ಭ ಶ್ರೀಮಂತರ ಪರವಾದ ಧೋರಣೆಯನ್ನು ತಳೆದಿದೆ. ದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ 7.8ರಷ್ಟು ದಾಖಲಾಗಿದ್ದು ಇದರಿಂದ ಯುವಜನರ ಬದುಕಲ್ಲಿ ಅತಂತ್ರತೆ ಕಾಡಿದೆ. ಭ್ರಷ್ಟಾಚಾರ ವ್ಯಾಪಕಗೊಂಡಿದ್ದು ಬಿಜೆಪಿ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತಿದ ಹೋರಾಟಗಾರರನ್ನು ದೇಶದ್ರೋಹದ ಪ್ರಕರಣದಡಿ ಬಂಧಿಸುವ, ವಿರೋಧ ಪಕ್ಷದ ನಾಯಕರುಗಳ ಮೇಲೆ ಇಡಿ, ಐಟಿ, ಸಿಬಿಐ ದಾಳಿ ನಡೆಸಿ ಸರಕಾರದ ವಿವಿಧ ಇಲಾಖೆಗಳನ್ನು ದುರುಪಯೋಗಪಡಿಸುವ ಮೂಲಕ ಬಿಜೆಪಿ ಸರಕಾರದ ವಿರುದ್ಧದ ಹೋರಾಟಗಳನ್ನು ಹತ್ತಿಕ್ಕುವ ಪಿತೂರಿಯನ್ನು ನಡೆಸಿದೆ. ಈ ಹಿನ್ನಲೆಯಲ್ಲಿ ಜನ ಸಮಾನ್ಯರು, ಬಡವರು ಬದುಕುವ ಹಕ್ಕುಗಳೆನ್ನೆಲ್ಲ ಕಸಿದುಕೊಂಡು ಸರ್ವಾಧಿಕಾರಿ ದೋರಣೆಯನ್ನು ಜಾರಿಗೊಳಿಸಿದೆ. ಇಂತಹ ಜನವಿರೋಧಿ ಆಡಳಿತದ ವಿರುದ್ಧ ಪ್ರತಿರೋಧ ದಾಖಲಿಸಲು ಈ ಬಾರಿ ಬಿಜೆಪಿಯನ್ನು ಸೋಲಿಸಲು ತೊಡಗಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಬಿ.ಕೆ ಇಮ್ತಿಯಾಝ್, ಜಯಂತಿ ಬಿ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು ಉಪಸ್ಥಿತರಿದ್ದರು.

ಸಭೆಯ ಅಧ್ಯಕ್ಷತೆಯನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ ಬಾಲಕೃಷ್ಣ ಶೆಟ್ಟಿ ವಹಿಸಿದ್ದರು. ಸಿಪಿಐಎಂ ಮಂಗಳೂರು ನಗರ ಕಾರ್ಯದರ್ಶಿ ಸಂತೋಷ್ ಬಜಾಲ್ ಸಭೆಯಲ್ಲಿ ಪ್ರಾಸ್ತಾವಿಕ ಮಾತನ್ನಾಡಿ ಕಾರ್ಯಕ್ರಮ ನಿರೂಪಿಸಿದರು.

share
Next Story
X