ನೇರಳಕಟ್ಟೆ: ಎ.15 ರಿಂದ 29ರ ತನಕ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಬಂಟ್ವಾಳ, ಎ.10: ನೇರಳಕಟ್ಟೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಸಾಂಸ್ಕೃತಿಕ ಸಂಘ, ಯಂಗ್ ಚಾಲಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರ, ನೇತಾಜಿ ಗೆಳೆಯರ ಬಳಗ ನೇತಾಜಿ ನಗರ ಹಾಗೂ ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ಎ.15 ರಿಂದ 29ರ ತನಕ ಪ್ರತಿದಿನ ಬೆಳಗ್ಗೆ 9:30 ರಿಂದ 4:30ರ ವರೆಗೆ ನೇರಳಕಟ್ಟೆ ಶ್ರೀ ಗಣೇಶ ಸಭಾಭವನದಲ್ಲಿ ನಡೆಯಲಿದೆ.
ನೇರಳಕಟ್ಟೆ ಶ್ರದ್ದಾ ಕೇಂದ್ರದ ಡಿ.ಕೆ.ಸ್ವಾಮಿ ಶಿಬಿರವನ್ನು ಉದ್ಘಾಟಿಸಲಿದ್ದು, ನೇರಳಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬೇಬಿ ನಾಯ್ಕ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಅನುಷಾ, ನೇರಳಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷ ರಾಮಚಂದ್ರ ಮಾಸ್ಟರ್, ನೇರಳಕಟ್ಟೆ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ಡಿ. ತನಿಯಪ್ಪ ಗೌಡ, ಪ್ರಗತಿಪರ ಕೃಷಿಕ ಸುರೇಶ್ ರೈ ಕುರ್ಲೆತ್ತಿಮಾರು ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.