ಕಾಪು| ಮನೆಯಂಗಳದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬೆಂಕಿ: ಏಳು ಪಕ್ಷಿಗಳ ಸಾವು
ಕಾಪು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶಂಕರಪುರ ಅರಶಿನಕಟ್ಟೆ ಎಂಬಲ್ಲಿ ಇಂದು ನಡೆದಿದೆ.
ಅರಶೀನಕಟ್ಟೆಯ ಜೋಸೆಫ್ ಎಂಬವರ ಮನೆಯಂಗಳದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕಲ್ ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಸ್ಕೂಟರ್ ಸಂಪೂರ್ಣ ಬೆಂಕಿಗಾಹುತಿಯಾಯಿತು. ಬೆಂಕಿಯ ಕೆನ್ನಾಲಿಗೆಗೆ ಮನೆಯಂಗಳದಲ್ಲಿ ಗೂಡಿನಲ್ಲಿದ್ದ ಏಳು ಪಕ್ಷಿಗಳು ಸಾವನ್ನಪ್ಪಿದೆ. ಕೃಷಿ ಯಂತ್ರ, ಪಂಪ್ ಸೆಟ್ ಸಹಿತ ವಿವಿಧ ಉಪಕರಣಗಳಿಗೆ ಹಾನಿಯಾಗಿದ್ದು, ಅಂದಾಜು ಮೂರು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
Next Story