ಬೆಳ್ತಂಗಡಿ: ನಿಲ್ಲಿಸಿದ ಲಾರಿಗೆ ಬೈಕ್ ಢಿಕ್ಕಿ; ಓರ್ವ ಮೃತ್ಯು

ಬೆಳ್ತಂಗಡಿ: ನಿಲ್ಲಿಸಿದ ಲಾರಿಗೆ ಬೈಕ್ ಢಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಎ.10 ರಾತ್ರಿ ಗುರುವಾಯನಕೆರೆ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ಬಳಿ ಎ.10 ರಂದು ರಾತ್ರಿ ಪಾರ್ಕ್ ಮಾಡಿ ನಿಲ್ಲಿಸಿದ ಲಾರಿಗೆ ಬೈಕ್ ಹೋಗಿ ಢಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಇಬ್ಬರ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ವಿಳಾಸಕ್ಕಾಗಿ ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಸಾವನ್ನಪ್ಪಿದವನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಗಾಯಾಳುವನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





