Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಜ್ಯ ವೃಂದ ಜ್ಯೇಷ್ಠತೆ: ಕಲ್ಯಾಣ...

ರಾಜ್ಯ ವೃಂದ ಜ್ಯೇಷ್ಠತೆ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಪಟ್ಟಿ ಇಲ್ಲ

ಅಧಿಕಾರಿ ವರ್ಗದಲ್ಲಿ ಅಸಮಾಧಾನ

ಜಿ.ಮಹಾಂತೇಶ್ಜಿ.ಮಹಾಂತೇಶ್11 April 2023 8:33 AM IST
share
ರಾಜ್ಯ ವೃಂದ ಜ್ಯೇಷ್ಠತೆ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಪಟ್ಟಿ ಇಲ್ಲ
ಅಧಿಕಾರಿ ವರ್ಗದಲ್ಲಿ ಅಸಮಾಧಾನ

ಬೆಂಗಳೂರು: 371 (ಜೆ) ಭಾಗದ ರಾಜ್ಯ ವೃಂದದಲ್ಲಿ ಜೇಷ್ಠತೆಯನ್ನು ಕಲ್ಯಾಣ ಕರ್ನಾಟಕದವರಿಗೆ ಪ್ರತ್ಯೇಕವಾಗಿ ಪ್ರಕಟಿಸದೇ ಒಂದೇ ಜೇಷ್ಠತೆ ಪ್ರಕಟಿಸಲು ಸಚಿವ ಸಂಪುಟ ಉಪ ಸಮಿತಿಯು ಸೂಚಿಸಿರುವುದು ಅಧಿಕಾರಿವರ್ಗದಲ್ಲಿ ಮತ್ತೊಮ್ಮೆ ಅಸಮಾಧಾನ ಭುಗಿಲೇಳಲು ದಾರಿಮಾಡಿಕೊಟ್ಟಿದೆ. ಅಲ್ಲದೇ ರಿಕ್ತ ಸ್ಥಾನ ಆಧಾರಿತ ಶೇ.8ರಷ್ಟು ಮೀಸಲಾತಿ ನಿಗದಿಪಡಿಸಲು ಸೂಕ್ತ ತಿದ್ದುಪಡಿ ತರಲು ಸರಕಾರವು ಮುಂದಾಗಿದೆ.

 371 (ಜೆ) ಅಡಿಯಲ್ಲಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಮೀಸಲಾತಿ ನೀತಿ ಪಾಲನೆ ಬಗ್ಗೆ ರಚಿಸಿರುವ ಸಚಿವ ಸಂಪುಟ ಉಪ ಸಮಿತಿಯ ಅಧ್ಯಕ್ಷ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ 2023ರ ಮಾರ್ಚ್ 24ರಂದು ನಡೆದಿದ್ದ ಸಭೆಯು ಈ ಸೂಚನೆ ನೀಡಿದೆ. ಸಭೆಯ ನಡಾವಳಿಗಳ ಪ್ರತಿಯು "the-file.in"ಗೆ ಲಭ್ಯವಾಗಿದೆ.

ರಾಜ್ಯ ವೃಂದದಲ್ಲಿ ಜ್ಯೇಷ್ಠತೆಯನ್ನು ಕಲ್ಯಾಣ ಕರ್ನಾಟಕದವರಿಗೆ ಪ್ರತ್ಯೇಕವಾಗಿ ಪ್ರಕಟಿಸುವುದನ್ನು ಬಿಟ್ಟು ಒಂದೇ ಜೇಷ್ಠತೆ ಪ್ರಕಟಿಸುವುದು. ಈ ಜ್ಯೇಷ್ಠತೆಯಲ್ಲಿ ಅಧಿಕಾರಿ, ನೌಕರರ ಹೆಸರಿನ ಮುಂದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಂದು ನಮೂದಿಸುವ ರೀತಿಯಲ್ಲೇ 371 (ಜೆ) ಎಸ್‌ಸಿ, ಎಸ್‌ಟಿ, ಸಾಮಾನ್ಯ, ಮಹಿಳೆ ಎಂದು ನಮೂದಿಸಬೇಕು. ರಾಜ್ಯವೃಂದದಲ್ಲಿ ಟಾರ್ಗೆಟ್ ಮೀಸಲಾತಿ ಬದಲು ರಿಕ್ತ ಸ್ಥಾನ ಆಧಾರಿತ ಶೇ.8ರಷ್ಟು ಮೀಸಲಾತಿ ನಿಗದಿಪಡಿಸಲು ಸೂಕ್ತ ತಿದ್ದುಪಡಿ ಪ್ರಸ್ತಾವವನ್ನು 7 ದಿನದೊಳಗೆ ಮಂಡಿಸಬೇಕು, ಎಂದು ಸಚಿವ ಸಂಪುಟ ಉಪ ಸಮಿತಿಯು ಸೂಚಿಸಿರುವುದು ನಡವಳಿಯಿಂದ ಗೊತ್ತಾಗಿದೆ.

 371(ಜೆ) ಭಾಗದ ರಾಜ್ಯ ವೃಂದದಲ್ಲಿ ಶೇ.8ರಷ್ಟು ಹುದ್ದೆಗಳನ್ನು ಕಲ್ಯಾಣ ಕರ್ನಾಟಕದ ಭಾಗಕ್ಕೆ ಮೀಸಲಿಟ್ಟಿದೆ. ಜೇಷ್ಠತೆ ಪಟ್ಟಿಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುತ್ತಿದೆ. ಹೀಗಾಗಿ ರಾಜ್ಯ ವೃಂದದ ಮೀಸಲಾತಿ ಅಡಿಯಲ್ಲಿ ಭಡ್ತಿ ಪಡೆದವರ ಹುದ್ದೆಗಳು ಮುಂಭಡ್ತಿ, ನಿವೃತ್ತಿ, ಸ್ವಯಂ ನಿವೃತ್ತಿ ಅಥವಾ ಮರಣ ಮುಂತಾದ ಕಾರಣಗಳಿಂದ ಹುದ್ದೆ ಖಾಲಿಯಾಗದಿದ್ದಲ್ಲಿ ನಂತರದ ಜೇಷ್ಠತೆಯಲ್ಲಿರುವವರಿಗೆ ಭಡ್ತಿಯ ಅವಕಾಶ ದೊರಕುವುದಿಲ್ಲ. ಇವರಿಗಿಂತ ಕಿರಿಯರಾದವರಿಗೆ ರಾಜ್ಯ ವಲಯದಲ್ಲಿ ಭಡ್ತಿ ದೊರೆತರೂ ಕಲ್ಯಾಣ ಕರ್ನಾಟಕ ಭಾಗದವರಿಗೆ ಭಡ್ತಿ ದೊರೆಯಲು ಅವಕಾಶವಿಲ್ಲ ಎಂಬ ಅಂಶವು ನಡವಳಿಯಿಂದ ತಿಳಿದು ಬಂದಿದೆ.

 ಶೇ.8ರಷ್ಟು ಮೀಸಲಿಟ್ಟಿರುವ ಎಲ್ಲ ಹುದ್ದೆಗಳನ್ನು ವಿಲೇ ಇಟ್ಟು ಆ ಹುದ್ದೆಗಳನ್ನು ಹೊರತುಪಡಿಸಿ ಇನ್ನಿತರ ಶೇ.92ರಲ್ಲಿನ ಹುದ್ದೆಗಳಲ್ಲಿ ಆ ಸಂದರ್ಭಗಳಲ್ಲಿ ಎಲ್ಲ ನೌಕರರನ್ನು ಒಳಗೊಂಡು ಭಡ್ತಿಗಳನ್ನು ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಮಂಡಳಿಯು ಮಧ್ಯಂತರ ತಡೆಯಾಜ್ಞೆ ನೀಡಿದೆ.

2017ರ ಆಗಸ್ಟ್ 17ರಂದು ನೀಡಿರುವ ಅಂತಿಮ ಆದೇಶದ ಪ್ರಕಾರ ಸ್ಥಳೀಯ ವೃಂದದ ನೌಕರರ ಸೇವಾ ಅವಧಿಯೆಂದು ಪರಿಗಣಿಸಿ ಈನೌಕರರಿಗೆ ಕಾಲ್ಪನಿಕ ಸೇವಾ ಜ್ಯೇಷ್ಠತೆ ನೀಡಿ ಸಾಮಾನ್ಯ ವರ್ಗದಡಿ ಮುಂಭಡ್ತಿ ಪಡೆದಿರುವ ಕರ್ನಾಟಕ ಸರಕಾದ ಸಚಿವಾಲಯದ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಎಲ್ಲ ಅಧಿಕಾರಿ, ನೌಕರರ ಮುಂಭಡ್ತಿಯನ್ನು ಮರು ಹೊಂದಾಣಿಕೆ ಮಾಡಿ 2014ರ ಜೂನ್ 9ರಿಂದ ಜಾರಿಗೆ ಬರುವಂತೆ ಸೇವಾ ಜ್ಯೇಷ್ಠತೆ ಸಿದ್ಧಪಡಿಸಲು ಸೂಕ್ತ ಆದೇಶ ಹೊರಡಿಸಲೂ ಸೂಚಿಸಿದೆ.

 ಅಲ್ಲದೇ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳಿಗೆ ಮಾತ್ರ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಆಯ್ಕೆ ಕೇಳುವುದು ಮತ್ತು ರಾಜ್ಯದಲ್ಲಿ ಸ್ಥಳೀಯ ವೃಂದ ಮತ್ತು ಮಿಕ್ಕುಳಿದ  ವೃಂದದ ಎರಡೂ ಹುದ್ದೆಗಳಿಗೆ ಒಂದೇ ಅರ್ಜಿ ಕರೆಯುವ ಸಂಬಂಧ ಕ್ರಮವಾಗಿ  2020ರ ಜೂನ್ 6 ಮತ್ತು 2016ರ ನವೆಂಬರ್ 16 ರಂದು ಹೊರಡಿಸಿರುವ ಸುತ್ತೋಲೆಯನ್ನೇ ಮುಂದುವರಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಗೊತ್ತಾಗಿದೆ.

‘ಜನರಲ್ ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾಗಿರುವ 371 (ಜೆ) ಅಡಿಯಲ್ಲಿ ಮುಂದಿನ ದಿನಗಳಲ್ಲಿ ಮುಂಭಡ್ತಿ ಮೀಸಲಾತಿ ನೀಡಲು 2013ರಲ್ಲಿ ಹೊರಡಿಸಿದ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013ರ ಅಧಿಸೂಚನೆ ಕಂಡಿಕೆ 5(1)ನ್ನು ತಿದ್ದುಪಡಿ ಮಾಡಬೇಕಿದೆ,’  ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸಭೆಯ ಗಮನಕ್ಕೆ ತಂದಿದ್ದರು.  ಈ ಕುರಿತು ಕಡತವನ್ನು ಕಳಿಸಿ ಅನುಮೋದನೆ ಪಡೆದು ಸೂಕ್ತ ಆದೇಶ ಹೊರಡಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಗೆ ಸಭೆಯು ಸೂಚಿಸಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X