Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಅಮುಲ್’ ನೆಪದಲ್ಲಿ ಹೈನುಗಾರಿಕೆ...

‘ಅಮುಲ್’ ನೆಪದಲ್ಲಿ ಹೈನುಗಾರಿಕೆ ನಿರ್ಮೂಲನೆಗೆ ಸಂಚು: ಪ್ರಾಂತ ರೈತ ಸಂಘ

11 April 2023 9:31 AM IST
share
‘ಅಮುಲ್’ ನೆಪದಲ್ಲಿ ಹೈನುಗಾರಿಕೆ ನಿರ್ಮೂಲನೆಗೆ ಸಂಚು: ಪ್ರಾಂತ ರೈತ ಸಂಘ

ಬೆಂಗಳೂರು, ಎ. 10: ‘ಇಡೀ ದೇಶದಲ್ಲೇ ಹೈನುಗಾರಿಕೆ ಉತ್ಪಾದನೆ ಹಾಗೂ ಸಹಕಾರಿ ಸಂಸ್ಕರಣೆ ಅನುಪಾತ ಗರಿಷ್ಠ ಪ್ರಮಾಣದಲ್ಲಿರುವ ರಾಜ್ಯದ ರೈತಾಪಿ ಹೈನುಗಾರಿಕೆಯನ್ನು ಸರ್ವನಾಶ ಮಾಡಲು, ಡೈರಿ ಕ್ಷೇತ್ರದ ಕಾರ್ಪೊರೇಟಿಕರಣ ಮಾಡಲು, ಆಸ್ಟ್ರೇಲಿಯಾ, ಡೆನ್ಮಾರ್ಕ್, ನ್ಯೂಜಿಲೆಂಡ್ ಮುಂತಾದ ಯೂರೋಪಿಯನ್ ದೇಶಗಳ ಡೈರಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಅಮುಲ್ ಹೆಸರಿನ ಮರೆಯಲ್ಲಿ ನಡೆಯುತ್ತಿರುವ ಬಹುದೊಡ್ಡ ಹುನ್ನಾರವನ್ನು ಹಿಮ್ಮೆಟ್ಟಿಸಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘ ತಿಳಿಸಿದೆ.

ಸೋಮವಾರ ಸಂಘದ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ‘ಲಾಭದಾಯಕ ದರವನ್ನು ನಿಗದಿ, ಸಹಕಾರಿ ಕ್ಷೇತ್ರ ಮತ್ತಷ್ಟು ಬಲಪಡಿಸುವಂತೆ ಹಾಲು ಉತ್ಪಾದಕರು ಹೋರಾಟಗಳನ್ನು ನಡೆಸಿ ಆಗ್ರಹಿಸಿದ್ದರೂ ನಿರ್ಲಕ್ಷಿಸಿದ್ದ ಬಿಜೆಪಿ ನೇತೃತ್ವದ ಸರಕಾರ ಕೆಎಂಎಫ್‍ನ 16 ಜಿಲ್ಲಾ ಹಾಲು ಒಕ್ಕೂಟಗಳ ಮಾರುಕಟ್ಟೆ ಕಸಿಯಲು ಟೊಂಕ ಕಟ್ಟಿ ನಿಂತಿರುವುದು ಹಾಗೂ ಚುನಾವಣಾ ಸಂದರ್ಭದಲ್ಲೂ ನಿರ್ಲಜ್ಜವಾಗಿ ಸಮರ್ಥಿಸುತ್ತಿರುವುದು ನಾಚೀಕೆಗೇಡು ಮಾತ್ರವಲ್ಲ, ರೈತರನ್ನು ನಾಶ ಮಾಡುವ ಸರ್ವಾಧಿಕಾರಿ ಠೇಂಕಾರ’ ಎಂದು ಟೀಕಿಸಿದ್ದಾರೆ.

‘ದೇಶದ ಡೈರಿ ಉತ್ಪನ್ನಗಳ ಮಾರುಕಟ್ಟೆಯ ಒಟ್ಟು ಗಾತ್ರ 12ಲಕ್ಷ ಕೋಟಿ ರೂ.ನಷ್ಟಿದೆ. ದೇಶದ ಎರಡು ಡೈರಿ ಸಹಕಾರಿ ಸಂಸ್ಥೆಗಳ ವಹಿವಾಟು ಅರ್ಧ ಲಕ್ಷ ಕೋಟಿ ರೂ.ಗಳಷ್ಟು ಮಾತ್ರ ಇದೆ. ದೇಶೀಯ ಸಹಕಾರಿ ಹೈನುಗಾರಿಕೆ ಬೆಳವಣಿಗೆಗೆ ಇಷ್ಟು ವಿಫುಲ ಅವಕಾಶಗಳಿದ್ದರೂ ವಹಿವಾಟು ಗಾತ್ರದಲ್ಲಿ ಸಣ್ಣದಾಗಿರುವ ಕೆಎಂಎಫ್‍ನಂತಹ ಸಹಕಾರಿ ಸಂಸ್ಥೆಗಳನ್ನು ನಾಶ ಮಾಡಿ ಕೇಂದ್ರೀಕರಣವನ್ನು ಉತ್ತೇಜಿಸುವುದು ಹಾಗೂ ಕಾರ್ಪೊರೇಟಿಕರಣ ಸಾಧಿಸುವುದು ಗ್ರಾಮೀಣ ನಿರುದ್ಯೋಗ ಮತ್ತು ಬಡತನವನ್ನು ತೀವ್ರಗೊಳಿಸುತ್ತದೆ ಎಂದು ಎಚ್ಚರಿಸಿದ್ದಾರೆ.

‘ವಲಸೆ ಮತ್ತು ಆತ್ಮಹತ್ಯೆಗಳನ್ನು ಹೆಚ್ಚಿಸುತ್ತದೆ. ಆತ್ಮ ನಿರ್ಭರತೆ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ಸರಕಾರ, ಕೃಷಿ ಉತ್ಪನ್ನಗಳ ಖಾತರಿ ಖರೀದಿಯ ಮಾದರಿ ವ್ಯವಸ್ಥೆಯನ್ನು ನಾಶ ಮಾಡುತ್ತಿದೆ. ಈ ಬಗ್ಗೆ ಜನರಲ್ಲಿ ವ್ಯಾಪಕ ಪ್ರಚಾರಾಂದೋಲನ ನಡೆಸಲಾಗುವುದು. ಜಾನುವಾರು ಸಂರಕ್ಷಣೆ ಹೆಸರಿನಲ್ಲಿ ತಂದಿರುವ ಗೋ ಹತ್ಯೆ ನಿಷೇಧ ಕಾಯ್ದೆ-2020 ಹಾಗೂ ಬಹುರಾಜ್ಯಗಳ ಸಹಕಾರಿ ಸಂಘಗಳ ತಿದ್ದುಪಡಿ ಕಾಯ್ದೆ-2022, ಹೈನುಗಾರಿಕೆ ಮೇಲಿನ ಜಿಎಸ್‍ಟಿ ಕ್ರಮಗಳು, ಹೈನುಗಾರಿಕೆ ನಿರುತ್ಸಾಹಗೊಳಿಸುವ, ಕಾರ್ಪೊರೇಟೀಕರಣ ಉತ್ತೇಜಿಸುವ ಅಂಶಗಳನ್ನು ಒಳಗೊಂಡಿದೆ ಎಂದು ಅವರು ದೂರಿದ್ದಾರೆ.

ರಾಜ್ಯ-ದೇಶದಲ್ಲಿ ಈಗಾಗಲೇ ರೈತರನ್ನು ಅಡ್ಡಗಟ್ಟಿ ಹಲ್ಲೆ ನಡೆಸುವ, ಜೈಲಿಗೆ ತಳ್ಳುವ ಹಲವು ಪ್ರಕರಣಗಳು ವರದಿಯಾಗಿವೆ. ಮುಕ್ತವಾಗಿದ್ದ ಜಾನುವಾರು ಸಾಗಾಣಿಕೆ, ಸಾಂಪ್ರದಾಯಿಕ ದನಗಳ ಜಾತ್ರೆಗಳು ಹಲವು ನಿರ್ಬಂಧಗಳನ್ನು ಅನುಭವಿಸುತ್ತಿದ್ದು ಜಾನುವಾರುಗಳ ಸಂಖ್ಯೆ ಹಾಗೂ ಹಾಲು ಉತ್ಪಾದನೆ ತೀವ್ರವಾಗಿ ಕುಸಿಯುತ್ತಿದೆ. ಅದೇ ವೇಳೆ ಜಾನುವಾರು ಮಾಂಸದ ರಪ್ತು ಉದ್ಯಮ ವೇಗವಾಗಿ ಬೆಳೆಯುತ್ತಿದೆ.

ಕೃಷಿ ಹಾಗೂ ರೈತ ವಿರೋಧಿಯಾದ ಕೃಷಿ ಕಾಯ್ದೆಗಳನ್ನು ಹಾಗೂ ಸಹಕಾರಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು. ಹೈನುಗಾರಿಕೆ ಮೇಲೆ ಹಾಕಿರುವ ಜಿಎಸ್‍ಟಿ ರದ್ದುಪಡಿಸಬೇಕು ಮತ್ತು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ ಕನಿಷ್ಠ 50 ರೂ.ನಿಗದಿಪಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. 

share
Next Story
X