ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ರಾಜ್ಯ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಮೊದಲೇ ಸೋಮವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.
ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ದೆಹಲಿಯಲ್ಲಿ ಸರಣಿ ಸಭೆ ನಡೆಸುತ್ತಿರುವ ಬಿಜೆಪಿ ನಾಯಕರು ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆನ್ನಲಾಗಿದೆ. ಆದರೆ, ಪಟ್ಟಿ ಬಿಡುಗಡೆ ಮಾತ್ರ ವಿಳಂಬ ಆಗಿದೆ.
ಕಾಂಗ್ರೆಸ್ ಟೀಕೆ:
'ಅಭ್ಯರ್ಥಿಗಳ ಕನಿಷ್ಠ ಒಂದು ಪಟ್ಟಿಯನ್ನೂ ಬಿಡುಗಡೆ ಮಾಡದಷ್ಟು ಬಿಜೆಪಿ ಅಸಮರ್ಥವಾಗಿದೆ. ಪಕ್ಷದ ಅಧ್ಯಕ್ಷರನ್ನು ಬಿಟ್ಟು ಕೇಂದ್ರ ಗೃಹಸಚಿವ ಅಮಿತ್ ಶಾ ಏಕೆ ಟಿಕೆಟ್ ನೀಡುವ ಉಸಾಬರಿಗೆ ಬಂದಿದ್ದು? ಬಿಜೆಪಿಯ ರಾಷ್ಟ್ರೀಯ ನಾಮಕಾವಸ್ಥೆ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಯಾವುದೇ ಸ್ವತಂತ್ರವಿಲ್ಲದ್ದು ಬಿಜೆಪಿಯ ಸರ್ವಾಧಿಕಾರಕ್ಕೆ ನಿದರ್ಶನ' ಎಂದು ವಿಪಕ್ಷ ಕಾಂಗ್ರೆಸ್ ಟೀಕಿಸಿದೆ.
Next Story