Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಗದೀಶ್‌ ಶೆಟ್ಟರ್ ಗೂ ಇಲ್ಲ ಟಿಕೆಟ್?:...

ಜಗದೀಶ್‌ ಶೆಟ್ಟರ್ ಗೂ ಇಲ್ಲ ಟಿಕೆಟ್?: ವರಿಷ್ಠರ ಮಾತಿನಿಂದ ನೋವಾಗಿದೆ ಎಂದ ಮಾಜಿ ಸಿಎಂ

11 April 2023 5:19 PM IST
share
ಜಗದೀಶ್‌ ಶೆಟ್ಟರ್ ಗೂ ಇಲ್ಲ ಟಿಕೆಟ್?: ವರಿಷ್ಠರ ಮಾತಿನಿಂದ ನೋವಾಗಿದೆ ಎಂದ ಮಾಜಿ ಸಿಎಂ

ಹುಬ್ಬಳ್ಳಿ, ಎ. 11: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೇರೆಯವರಿಗೆ ತಮ್ಮ ಕ್ಷೇತ್ರವನ್ನು ಬಿಟ್ಟು ಕೊಡುವಂತೆ ಸೂಚಿಸಿರುವ ಬಿಜೆಪಿ ಹೈಕಮಾಂಡ್ ನಡೆಯಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್‍ನಿಂದ ನನಗೆ ಬೆಳಗ್ಗೆ ದೂರವಾಣಿ ಕರೆ ಬಂತು. ನೀವು ಹಿರಿಯರಿದ್ದೀರಿ, ನಿಮ್ಮ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟುಕೊಡುವಂತೆ ಹೇಳಿದರು. ಉತ್ತರ ಕರ್ನಾಟಕ ಭಾಗದಲ್ಲಿ 30 ವರ್ಷಗಳಿಂದ ಪಕ್ಷವನ್ನು ಕಟ್ಟುವ ಕೆಲಸ ಮಾಡಿದ್ದೇನೆ. ನನ್ನಂತಹ ಹಿರಿಯರಿಗೆ ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದೇನೆ ಎಂದರು.

ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ, ಸಚಿವನಾಗಿ ಕೆಲಸ ಮಾಡಿದ್ದೇನೆ. ನಿನ್ನೆಯವರೆಗೆ ನನಗೆ ಟಿಕೆಟ್ ಖಚಿತ ಎಂದು ಹೇಳಲಾಗುತ್ತಿತ್ತು. ಇವತ್ತು ಬೆಳಗ್ಗೆ ಕರೆ ಮಾಡಿ ಬೇರೆಯವರಿಗೆ ಅವಕಾಶ ಮಾಡಿ ಕೊಡಿ ಎಂದರೆ ಮನಸ್ಸಿಗೆ ನೋವು ಆಗುವುದಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಆರು ಬಾರಿ ಗೆದ್ದಿದ್ದೇನೆ. ನೂರಾರು ಜನರಿಗೆ ಟಿಕೆಟ್ ಕೊಡಿಸಿದ್ದೇನೆ. ಈಗ ನನಗೆ ಟಿಕೆಟ್ ನೀಡದಿರಲು ಕಾರಣವೇನು?, ಸಮೀಕ್ಷೆಗಳೆಲ್ಲವೂ ನನ್ನ ಪರವಾಗಿಯೆ ಇದೆ. ಕ್ಷೇತ್ರದ ಶೇ.70ರಷ್ಟು ಜನರು ನನ್ನ ಪರವಾಗಿ ಒಲವು ಹೊಂದಿದ್ದಾರೆ. ರಾಜಕಾರಣದಲ್ಲಿ ಒಂದೆ ಒಂದು ಕಪ್ಪು ಚುಕ್ಕೆ ಇಲ್ಲ, ಭ್ರಷ್ಟಾಚಾರದ ಆಪಾದನೆ ಇಲ್ಲದಂತೆ 30 ವರ್ಷ ರಾಜಕಾರಣ ಮಾಡಿದ್ದೇನೆ ಎಂದು ಅವರು ಹೇಳಿದರು.

ನನಗೆ ಬೇರೆ ಅವಕಾಶ ಕೊಡುವುದಾಗಿ ಹೇಳಿದ್ದಾರೆ. ಅಂತಹ ಪರಿಸ್ಥಿತಿ ಇದ್ದಿದ್ದರೆ ಎರಡು, ಮೂರು ತಿಂಗಳ ಮುಂಚಿತವಾಗಿಯೆ ನನ್ನನ್ನು ಕರೆದು ಚರ್ಚಿಸಬೇಕಿತ್ತು. ನಾಮಪತ್ರ ಸಲ್ಲಿಸಲು ಎರಡು, ಮೂರು ದಿನ ಇರುವಾಗ ವರಿಷ್ಠರು ರೀತಿ ನಡೆದುಕೊಂಡರೆ ಏನು ಹೇಳಬೇಕು ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿರುವುದಕ್ಕೂ ನನ್ನ ನಿಲುವಿನಲ್ಲೂ ಸಾಕಷ್ಟು ವ್ಯತ್ಯಾಸ ಇದೆ. ನನ್ನಲ್ಲಿ ಇನ್ನು 10-15 ವರ್ಷ ಸಕ್ರಿಯ ರಾಜಕಾರಣ ಮಾಡುವ ಶಕ್ತಿಯಿದೆ. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ನಾನು ಮತ್ತೆ ಸ್ಪರ್ಧಿಸುತ್ತೇನೆ. ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದು ತೋರಿಸುತ್ತೇನೆ ಎಂದು ಜಗದೀಶ್ ಶೆಟ್ಟರ್ ಸವಾಲು ಹಾಕಿದರು.

share
Next Story
X