ಬೈಕ್‌ಗಳ ಮಧ್ಯೆ ಅಪಘಾತ: ಓರ್ವ ಸವಾರ ಮೃತ್ಯು
ಬೈಂದೂರು, ಎ.11: ಎರಡು ಬೈಕ್‌ಗಳ ಮಧ್ಯೆ ಉಪ್ಪುಂದ ಗ್ರಾಮದ ತಾರಾ ಪತಿ ಅಂಚೆ ಕಚೇರಿ ಬಳಿ ಎ.10ರಂದು ಸಂಜೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಬೈಕ್ ಸವಾರ ಮಹೇಶ್ ಎಂದು ಗುರುತಿಸಲಾಗಿದೆ. ಇನ್ನೊಂದು ಬೈಕಿನ ಸವಾರ ಆನಂದ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆ ಬಾಗಿಲು ಕಡೆಗೆ ತಾರಾಪತಿ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್, ಓಲಗ ಮಂಟಪ ಕಡೆಯಿಂದ ತಾರಾಪತಿ ಕಡೆಗೆ ಬರುತ್ತಿದ್ದ ಇನ್ನೊಂದು ಬೈಕ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಸವಾರರು ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರಿಂದ ಗಂಭೀರ ವಾಗಿ ಗಾಯಗೊಂಡ ಮಹೇಶ್ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story