ಬಿಜೆಪಿ ಪಟ್ಟಿ ಪ್ರಕಟ: ಅಂಗಾರ, ಸಂಜೀವ ಮಠಂದೂರು ಇಲ್ಲ ಟಿಕೆಟ್; ದಕ್ಷಿಣ ಕನ್ನಡದಿಂದ ಮೂರು ಹೊಸ ಮುಖಗಳು

ಮಂಗಳೂರು: ಮಂಗಳವಾರ ರಾತ್ರಿ ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ.
ಸುಳ್ಯದಿಂದ ಸಚಿವ ಅಂಗಾರ ಅವರನ್ನು ಕೈ ಬಿಟ್ಟು ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ( ಉಳ್ಳಾಲ ) ಟಿಕೆಟ್ ಮಾಜಿ ಜಿ.ಪಂ. ಸದಸ್ಯ ಸತೀಶ್ ಕುಂಪಲ ಅವರಿಗೆ ಸಿಕ್ಕಿದೆ. ಪುತ್ತೂರು ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನು ಬಿಟ್ಟು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.
ಉಳಿದಂತೆ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ನೀಡಲಾಗಿದೆ. ಮಂಗಳೂರು ದಕ್ಷಿಣದಿಂದ ವೇದವ್ಯಾಸ ಕಾಮತ್ , ಮಂಗಳೂರು ಉತ್ತರದಿಂದ ಡಾ. ಭರತ್ ಶೆಟ್ಟಿ , ಬಂಟ್ವಾಳದಿಂದ ರಾಜೇಶ್ ನಾಯ್ಕ್, ಮೂಡುಬಿದಿರೆಯಿಂದ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿಯಿಂದ ಹರೀಶ್ ಪೂಂಜಾ ಮತ್ತೆ ಬಿಜೆಪಿ ಅಭ್ಯರ್ಥಿಗಳಾಗಲಿದ್ದಾರೆ.
Next Story