Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುದ್ದಿಗಳ ತಪಾಸಣೆಗೆ ಸತ್ಯಶೋಧಕ ಸಂಸ್ಥೆ...

ಸುದ್ದಿಗಳ ತಪಾಸಣೆಗೆ ಸತ್ಯಶೋಧಕ ಸಂಸ್ಥೆ ಸ್ಥಾಪನೆ: ಕೇಂದ್ರದ ಇಚ್ಛೆಯನ್ನು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

11 April 2023 10:37 PM IST
share
ಸುದ್ದಿಗಳ ತಪಾಸಣೆಗೆ ಸತ್ಯಶೋಧಕ ಸಂಸ್ಥೆ ಸ್ಥಾಪನೆ: ಕೇಂದ್ರದ ಇಚ್ಛೆಯನ್ನು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

ಮುಂಬೈ,ಎ.11: ಮಾಧ್ಯಮಗಳಲ್ಲಿ ಪ್ರಸಾರವಾಗುವ ಕೇಂದ್ರ ಸರಕಾರದ ಕುರಿತ ಸುದ್ದಿಗಳ ತಪಾಸಣೆ ನಡೆಸುವುದಕ್ಕಾಗಿ ಸತ್ಯಶೋಧಕ ಸಂಸ್ಥೆಯೊಂದರ ಸ್ಥಾಪನೆಗಾಗಿ 2021 ರ ಮಾಹಿತಿ ತಂತ್ರಜ್ಞಾನ ಕಾನೂನುಗಳ ತಿದ್ದುಪಡಿಗೆ ಬಯಸಿರುವ ಬಗ್ಗೆ ವಿವರಣೆ ನೀಡುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ.

ಇಂತಹ ತಿದ್ದುಪಡಿಗಳ ಸಾಂವಿಧಾನಿಕ ಸಿಂದುತ್ವವನ್ನು ಪ್ರಶ್ನಿಸಿ ಜನಪ್ರಿಯ ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಅವರು ಸಲ್ಲಿಸಿದ ಅರ್ಜಿಯ ಆಲಿಕೆಯನ್ನು ನಡೆಸಿದ ನ್ಯಾಯಪೀಠ ಈ ನಿರ್ದೇಶನ ನೀಡಿದೆ. ಎಪ್ರಿಲ್ 19ರೊಳಗೆ ಕೇಂದ್ರ ಸರಕಾರವು ಈ ವಿಷಯದ ಬಗ್ಗೆ ಅದರ ನಿಲುವನ್ನು ತಿಳಿಸಬೇಕೆಂದು ನ್ಯಾಯಾಲಯ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ.

ಈ ತಿದ್ದುಪಡಿಯ ಅಗತ್ಯವೆನಿಸುವುದಕ್ಕೆ ಯಾವುದೇ ವಾಸ್ತವಿಕ ನೆಲೆಗಟ್ಟು ಅಥವಾ ತಾರ್ಕಿಕ ಕಾರಣವಿದೆಯೇ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಈ ತಿದ್ದುಪಡಿಯಿಂದ ಪ್ರತಿಕೂಲ ಪರಿಣಾಮವಾದೀತೆಂದು ಅರ್ಜಿದಾರ ಕಾಮ್ರಾ ಭಾವಿಸಿದ್ದಾರೆ ಎಂದು ಅದುಹೇಳಿದೆ.

ಆನ್ಲೈನ್ ಗೇಮಿಂಗ್ ಹಾಗೂ ಕೇಂದ್ರ ಸರಕಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ನಿಯಂತ್ರಿಸಲು ಕೇಂದ್ರ ಸರಕಾರವು ಎಪ್ರಿಲ್ 6ರಂದು 2021ರ ಮಾಹಿತಿ ತಂತ್ರಜ್ಞಾನ ನಿಯಮಾವಳಿಗಳನ್ನು ಜಾರಿಗೆ ತಂದಿತು. ಕೇಂದ್ರ ಸರಕಾರದ ವ್ಯವಹಾರಗಳಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ನಕಲಿ ಅಥವಾ ಸುಳ್ಳು ಇಲ್ಲವೇ ತಪ್ಪುದಾರಿಗೆಳೆಯುವಂತಹದ್ದು’ ಎಂಬುದಾಗಿ ಟ್ಯಾಗ್ ಮಾಡುವ ಅಧಿಕಾರ ಹೊಂದಿರುವ ಸತ್ಯಶೋಧಕ ಸಂಸ್ಥೆಯ ಸ್ಥಾಪನೆಗೆ ಕೇಂದ್ರ ಮಾಹಿತಿತಂತ್ರಜ್ಞಾನ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಲಿದೆ ಎಂದು ನಿಯಮಾವಳಿಗಳು ತಿಳಿಸುತ್ತವೆ.

ಕಳೆದ ಜನವರಿಯಲ್ಲಿ ಮಾಹಿತಿತಂತ್ರಜ್ಞಾನ ಕಾನೂನಿನ ಕರಡು ನಿಯಮಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿತ್ತು. ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಅಧೀನದಲ್ಲಿರುವ ಪತ್ರಿಕಾ ಮಾಹಿತಿ ಬ್ಯೂರೋ ಅಥವಾ ಕೇಂದ್ರ ಸರಕಾರವು ಅಧಿಕಾರ ನೀಡಿರುವ ಇತರ ಯಾವುದೇ ಏಜೆನ್ಸಿಗೆ, ಮಾಧ್ಯಮಗಳಲ್ಲಿ ಪ್ರಸಾರವಾಗುವ ಸುದ್ದಿಯನ್ನು ನಕಲಿ ಎಂಬುದಾಗಿ ಟ್ಯಾಗ್ ಮಾಡುವ ಅಧಿಕಾರವನ್ನು ಹೊಂದಿರುವುದು ಎಂದು ತಿಳಿಸಲಾಗಿತ್ತು.

ಆದರೆ ಗುರುವಾರ ಅಧಿಸೂಚನೆಗೆ ಮಾಡಲಾದ ಅಂತಿಮ ತಿದ್ದುಪಡಿಯಲ್ಲಿ ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯಶೋಧಕ ದಳದ ಪ್ರಸ್ತಾವನೆ ಮಾಡಲಾಗಿಲ್ಲ. ಅಧಿಕೃತ ಇಲಾಖೆಗಳು ತಾವಾಗಿಯೇ ನಿಖರವೆಂದು ದೃಢೀಕರಿಸಿದ್ದ ಹೇಳಿಕೆಗಳನ್ನೇ ‘ಸುಳ್ಳು ಸುದ್ದಿ’ ಎಂಬ ಹಣೆಪಟ್ಟಿ ಕಟ್ಟಿದ್ದಕ್ಕಾಗಿ ಪತ್ರಿಕಾ ಮಾಹಿತಿ ಬ್ಯೂರೋ ವ್ಯಾಪಕ ಟೀಕೆಗೊಳಗಾಗಿತ್ತು.

share
Next Story
X