ಬಿಜೆಪಿ ಮೊದಲ ಪಟ್ಟಿಯಲ್ಲಿ ಘೋಷಣೆಯಾಗದ ಟಿಕೆಟ್: ದೆಹಲಿಗೆ ತೆರಳಲಿರುವ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ಅಭ್ಯರ್ಥಿಗ ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಘೋಷಣೆ ಮಾಡದೇ ಇರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಗದೀಶ್ ಶೆಟ್ಟರ್ ದೆಹಲಿಗೆ ಪ್ರಯಾಣ ತೆರಳಲಿದ್ದಾರೆ.
ಮೊದಲ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಅವರ ಹೆಸರು ಇರದ ಕಾರಣ ಸಾಕಷ್ಟು ಅವರ ಅಭಿಮಾನಿಗಳು ಶೆಟ್ಟರ್ ನಿವಾಸಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಂಜೆ ಫೋನ್ ಮಾಡಿ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದರು.
'ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನ ಭೇಟಿಯಾಗಬೇಕಿತ್ತು. ಆದರೆ ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರ ವಿಮಾನ ನಿಲ್ದಾಣದಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ' ಎಂದು ಶೆಟ್ಟರ್ ದೆಹಲಿಗೆ ಹೋಗುವ ಮುನ್ನ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
Next Story





