ಎ.13ರಂದು ಕುಂದಾಪುರ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಎ.13ರಂದು ಬೆಳಿಗ್ಗೆ 10 ಗಂಟೆಗೆ ಕುಂದಾಪುರದ ಶಾಸ್ತ್ರಿ ಸರ್ಕಲ್‌ನ ಪೋಲಿಸ್ ಚೌಕಿ ಬಳಿ ಸಾರ್ವಜನಿಕ ಸಭೆ ನಡೆಸಿ ಆ ಬಳಿಕ ಚುನಾವಣಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಉಪಾಧ್ಯಕ್ಷರಾದ ಅಭಯಚಂದ್ರ ಜೈನ್, ಮಂಜುನಾಥ ಭಂಡಾರಿ, ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಫೂರ್, ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಂಗ್ರೆಸ್ ಹಿರಿಯ ನಾಯಕ ಮಲ್ಯಾಡಿ ಶಿವರಾಮ ಶೆಟ್ಟಿ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story