Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮುಂದಿಟ್ಟು...

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮುಂದಿಟ್ಟು ಚುನಾವಣಾ ಸ್ಪರ್ಧೆ: ಪ್ರಸಾದ್‌ ರಾಜ್ ಕಾಂಚನ್

12 April 2023 7:37 PM IST
share
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮುಂದಿಟ್ಟು ಚುನಾವಣಾ ಸ್ಪರ್ಧೆ: ಪ್ರಸಾದ್‌ ರಾಜ್ ಕಾಂಚನ್

ಉಡುಪಿ, ಎ.12: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರ ಗಾರಿಕೆ ಇಟ್ಟುಕೊಂಡು ಚುನಾವಣೆ ಯನ್ನು ಎದುರಿಸುತ್ತಿದ್ದೇವೆಯೇ ಹೊರತು ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಅಲ್ಲ. ಬಿಜೆಪಿ ಅಭ್ಯರ್ಥಿ ನಮ್ಮ ಸಮುದಾಯದವರೇ ಆದರೂ ಬುದ್ದಿವಂತ, ವಿದ್ಯಾವಂತರಾಗಿರುವ ಈ ಕ್ಷೇತ್ರದ ಮತದಾರರು ತಮಗೆ ಸೂಕ್ತವಾದ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ ಎಂದು  ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ ರಾಜ್ ಕಾಂಚನ್ ತಿಳಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ತಿಂಗಳುನಿಂದ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇವೆ. ಈಗಾಗಲೇ 100 ಮಂದಿಯ ಕಮಿಟಿ ರಚನೆ ಮಾಡಿ ಕಾರ್ಯ ಪ್ರವೃತ್ತರಾಗಿದ್ದೇವೆ. ಚುನಾವಣಾ ಪ್ರಚಾರ ನಡೆಸಲು ಸಿದ್ಧರಾಗಿಜ್ದೇವೆ. ನಾಳೆಯಿಂದ ಉಡುಪಿ ನಗರಸಭೆ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯ ಆರಂಭಿಸುತ್ತಿದ್ದೇವೆ. ಈ ಚುನಾವಣೆಯನ್ನು ನಾವು ಸವಾಲಾಗಿ ತೆಗೆದುಕೊಂಡಿದ್ದೇವೆ ಎಂದರು.  

ಕ್ಷೇತ್ರದ ಜನತೆ ಬಿಜೆಪಿ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆಯಲ್ಲಿದ್ದಾರೆ. ಜನರಿಗೆ ಬೇಕಾದ ವಿದ್ಯಾವಂತ ಅಭ್ಯರ್ಥಿಗಳನ್ನೇ ಕಾಂಗ್ರೆಸ್ ಪಕ್ಷ ನೀಡಿದೆ. ಮನೆಮನೆಗೆ ಭೇಟಿ ನೀಡಿದಾಗ ಮತದಾರರು ಒಳ್ಳೆಯ ರೀತಿಯ ಸ್ಪಂದನೆ ಕೊಡುತ್ತಿದ್ದಾರೆ ಎಂದು ಅವರು ಹೇಳಿದರು.  

ನಾಮಪತ್ರವನ್ನು ಎ.17ರಂದು ಬೆಳಗ್ಗೆ 11.30ರ ಒಳಗೆ ಸಲ್ಲಿಸಲು ತೀರ್ಮಾನ ಮಾಡಿದ್ದೇನೆ. ನಾನು ರಾಜಕೀಯಕ್ಕೆ ಹೊಸಬ ಅಲ್ಲ. ನಾನು ನನ್ನ 26ನೇ ವರ್ಷ ವಯಸ್ಸಿನ ಗ್ರಾಮೀಣ ಕಾಂಗ್ರೆಸ್‌ನ ಅಧ್ಯಕ್ಷನಾಗಿದ್ದೇನೆ. ನಿರಂತರವಾಗಿ ನಾನು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಕಳೆದ ಗ್ರಾಪಂ ಚುನಾ ವಣೆಯಲ್ಲೂ ನಾನು ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂಪೂರ್ಣ ಬೆಂಬಲ ದೊರೆತಿದೆ. ಅವರೇ ನಮ್ಮ ಬೆನ್ನೆಲುಬು ಎಂದು ಅವರು ತಿಳಿಸಿದರು.

ನಾನು ಶಾಸಕನಾಗಿ ಆಯ್ಕೆಯಾದರೆ ಎಲ್ಲ ವರ್ಗದವರ ಆರ್ಥಿಕ ಪ್ರಗತಿಗೆ ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳ ಲಾಗುವುದು. ಶಿಕ್ಷಣ, ಕೈಗಾರಿಕೆ, ಪ್ರವಾಸೋದ್ಯಮ, ಆರೋಗ್ಯ ಕ್ಷೇತ್ರಗಳನ್ನು ಬಳಸಿಕೊಂಡು ಮುಂದಿನ ಪೀಳಿಗೆಗೆ ಅನುಕೂಲಕರವಾದ ವಾತಾವರಣವನ್ನು ಸೃಷ್ಠಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಹಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮುಖಂಡರಾದ ಕುಶಲ್ ಶೆಟ್ಟಿ, ವಕ್ತಾರ ಭಾಸ್ಕರ ರಾವ್ ಕಿದಿಯೂರು ಉಪಸ್ಥಿತರಿದ್ದರು.

share
Next Story
X