ಲೋಪವಾಗಿದ್ದರೆ ರಘುಪತಿ ಭಟ್ ಜೊತೆ ಸಿಎಂ ಮಾತುಕತೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಶಾಸಕ ರಘುಪತಿ ಭಟ್ ಕಾರ್ಯಕರ್ತರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥ ಪಡಿಸುವ ಮೂಲಕ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ಹೊಂದಾಣಿಕೆಯಲ್ಲಿ ಲೋಪವಾಗಿದ್ದರೆ ಅವರೊಂದಿಗೆ ಮುಖ್ಯಮಂತ್ರಿ ಹಾಗೂ ಪಕ್ಷದವರು ಮಾತುಕತೆ ನಡೆಸಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿದ್ದ ಕೆಲವು ಶಾಸಕರು ಈಗಾಗಲೇ ಬೇರೆಯವರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರಾಜೀನಾಮೆ ನೀಡಿದ್ದಾರೆ. ಅವರ ನಿರ್ಧಾರ ಮಾದರಿಯಾಗಿದೆ ಎಂದರು.
ಬಿಜೆಪಿ ಪಕ್ಷ ಹಲವಾರು ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದೆ. ಎಲ್ಲ ವರ್ಗವನ್ನೂ ಗಮನದಲ್ಲಿಟ್ಟುಕೊಂಡು ಟಿಕೆಟ್ ಹಂಚಿಕೆ ಮಾಡಲಾಗಿದೆ. ಅಸಮಾಧಾನ ಉಂಟಾಗಿರುವವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದು ಅವರು ತಿಳಿಸಿದರು.
Next Story





