ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ನಿಷೇಧ: ಚುನಾವಣಾಧಿಕಾರಿ

ಬೆಂಗಳೂರು, ಎ.12: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಬಿಬಿಎಂಪಿ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಕಾರ್ಯ ಮತ್ತು ಪ್ರಚಾರ ಕಾರ್ಯದಲ್ಲಿ ಯಾವುದೆ ರೀತಿಯಲ್ಲೂ ಮಕ್ಕಳನ್ನು ಬಳಸಿಕೊಳ್ಳಬಾರದು ಎಂದು ಚುನಾವಣಾ ಆಯೋಗ ನಿಷೇಧಿಸಿದೆ.
ಆದರಂತೆ, ‘ರಾಜಕೀಯ ಪಕ್ಷಗಳ ಮೆರವಣೆಗೆ, ಸಾರ್ವಜನಿಕ ಭಾಷಣ ಮನೆ-ಮನೆಗೆ ಭೇಟಿ ನೀಡುವುದು, ಪಕ್ಷದ ಚಿಹ್ನೆಯಿರುವ ಬುಕ್ ಮತ್ತು ಬಟ್ಟೆಗಳನ್ನು ಹಂಚುವುದು, ಕರಪತ್ರಗಳನ್ನು ಹಂಚುವುದು ಇನ್ನು ಮುಂತಾದ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





