ಕಾಸರಗೋಡು : ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಕಾಸರಗೋಡು: ಪೊಲೀಸ್ ಸಿಬ್ಬಂದಿಯೋರ್ವರು ವಾಸಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕೊಲ್ಲಂ ಮೂಲದ ಬೈಜು (54) ಮೃತಪಟ್ಟವರು.
ಬುಧವಾರ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸಂಜೆ ಪೊಲೀಸ್ ಸಿಬ್ಬಂದಿ ಅವರ ವಾಸಸ್ಥಳಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story





