Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈಶ್ವರಪ್ಪ ರಾಜಕೀಯ ನಿವೃತ್ತಿಗೆ ಅವರ...

ಈಶ್ವರಪ್ಪ ರಾಜಕೀಯ ನಿವೃತ್ತಿಗೆ ಅವರ ನಿಯಂತ್ರಣವಿಲ್ಲದ ನಾಲಿಗೆ ಕಾರಣ: MLC ಆಯನೂರು ಮಂಜುನಾಥ್

12 April 2023 9:20 PM IST
share
ಈಶ್ವರಪ್ಪ ರಾಜಕೀಯ ನಿವೃತ್ತಿಗೆ ಅವರ ನಿಯಂತ್ರಣವಿಲ್ಲದ ನಾಲಿಗೆ ಕಾರಣ: MLC ಆಯನೂರು ಮಂಜುನಾಥ್

ಶಿವಮೊಗ್ಗ, ಎ.12:ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳಲು ಅವರ ನಾಲಿಗೆ ಮತ್ತು ಪುತ್ರ ವ್ಯಾಮೋಹ ಕಾರಣ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆ.ಎಸ್ ಈಶ್ವರಪ್ಪನವರು ತಮ್ಮ ನಾಲಿಗೆಯನ್ನು ಮತ್ತು ಪುತ್ರ ವ್ಯಾಮೋಹವನ್ನು ನಿಯಂತ್ರಣದಲ್ಲಿಟ್ಟಿಕೊಂಡಿದ್ದಿದ್ದರೆ ಅವರು ಇಂದು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.

ಸುಧೀರ್ಘ ಕಾಲ ರಾಜಕಾರಣದಲ್ಲಿದ್ದ ಈಶ್ವರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು ಶಿವಮೊಗ್ಗ ಜಿಲ್ಲೆಯ ರಾಜಕಾರಣದ ಮಗ್ಗಲು ಬದಲಾದಂತಾಗಿದೆ. ಈಶ್ವರಪ್ಪ ಅವರಿಗೆ ವ್ಯಕ್ತಿಗತವಾಗಿ ಶತ್ರುಗಳಿಲ್ಲ. ಎಲ್ಲರೊಂದಿಗೆ ಸ್ನೇಹಸ್ವಭಾವದೊಂದಿಗೆ ಇದ್ದರು. ಅವರ ವಿರುದ್ಧ ರಾಜಕೀಯ ನಿಲುವು ಏನೇ ಇದ್ದರೂ ಅವರು ನನಗೆ ಆತ್ಮೀಯರೇ ಆಗಿದ್ದರು. ಅವರ ಈ ರೀತಿಯ ನಿರ್ಗಮನ ಆಘಾತಕಾರಿಯಾದದ್ದು ಎಂದು  ಹೇಳಿದರು.

ಈಶ್ವರಪ್ಪನವರು ತಮ್ಮ ನಿಯಂತ್ರಣವಿಲ್ಲದ ನಾಲಿಗೆ, ಆತ್ಯುತ್ತಮ ಕೆಲಸ ಮಾಡಿದ್ದರೂ ಪುತ್ರ ವ್ಯಾಮೋಹದಿಂದ ಹೊರಬಂದಿದ್ದರೆ, ಅವರು ನಾಯಕತ್ವಕ್ಕೆ ಕಪ್ಪುಚುಕ್ಕೆ ಇರುತ್ತಿರಲಿಲ್ಲ. ತನ್ನದಲ್ಲದ ತಪ್ಪಿಗಾಗಿ ಈ ರೀತಿ ನಿರ್ಗಮಿಸುತ್ತಿದ್ದಾರೆ. ಮಗನನ್ನು ಮತ್ತು ತಮ್ಮನಾಲಿಗೆಯನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಿದ್ದರೆ ಅತ್ಯಂತ ಗೌರವಯುತ ನಾಯಕರಾಗುತ್ತಿದ್ದರು. ಇಂತಹ ಈಶ್ವರಪ್ಪ ಅವರು ಕಣದಿಂದ ಹಿಂದೆ ಸರಿದ ಮಾತ್ರಕ್ಕೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನಿನ್ನೂ ಸ್ಪರ್ಧಾಕಾಂಕ್ಷಿಯಾಗಿದ್ದೇನೆ. ಒಂದೆರೆಡು ದಿನಗಳಲ್ಲಿ ಯಾವ ಪಕ್ಷದಿಂದ ಸ್ಪರ್ಧೆ ನಡೆಸಲಿದ್ದೇನೆ ಎನ್ನುವುದನ್ನು ಸ್ಪಷ್ಟಪಡಿಸಲಿದ್ದೇನೆ ಎಂದು ಆಯನೂರು ಮಂಜುನಾಥ್ ತಾವಿನ್ನೂ ಸ್ಪರ್ಧೆಯಲ್ಲಿದ್ದೇನೆ ಎಂದು ಘೋಷಿಸಿದರು.

ವಿಧಾನಪರಿಷತ್ತಿನಲ್ಲಿ ಕಾರ್ಮಿಕರು, ಶಿಕ್ಷಕರು, ಪದವೀಧರರು,ಪೌರಕಾರ್ಮಿಕರ, ಕೂಲಿ ಕಾರ್ಮಿಕರ ಪರವಾಗಿ ಪ್ರಬಲವಾಗಿ ವಾದ ಮಂಡಿಸಲು, ಕಾನೂನು ರಚನೆ ಮೂಲಕ ಫಲಪ್ರದವಾಗಿ ಕೆಲಸ ಮಾಡಲು ವಿಧಾನಸಭೆ ಸೂಕ್ತ. ಈ ಕಾರಣ ತಾವು ವಿಧಾನಸಭೆ ಹೋಗಲು ನಿರ್ಧರಿಸಿದ್ದೇನೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಯಾವ ಪಕ್ಷಗಳೂ ಇದುವರೆಗೂ ಟಿಕೆಟ್ ಘೋಷಿಸಿಲ್ಲ. ತಮ್ಮ ಸ್ಪರ್ಧೆ ನಿಶ್ಚಿತ, ಆದರೆ ಯಾವ ಪಕ್ಷದಿಂದ ಎಂಬುದನ್ನು ಸದ್ಯದಲ್ಲೆ ಹೇಳಿಲಿದ್ದೇನೆ ಎಂದರು.

share
Next Story
X