ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ಬಂದರ್‌ನ ನಿವಾಸಿ ಅಮೀರ್ ಸುಹೈಲ್ (27) ಎಂಬಾತನ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ಎನ್‌ಡಿಪಿಎಸ್ ಆ್ಯಕ್ಟ್‌ನಂತೆ ಪ್ರಕರಣ ದಾಖಲಾಗಿತ್ತು. ನ್ಯಾಯಾಯವು ಈತನಿಗೆ ಹಾಜರಾಗಲು ವಾರಂಟ್ ಜಾರಿ ಮಾಡಿತ್ತು. ಆದರೆ ತಲೆಮರೆಸಿಕೊಂಡಿದ್ದ ಆರೋಪಿ ಸುಹೈಲ್‌ನ್ನು ಪೊಲೀಸರು ಮಂಗಳವಾರ ಬಂಧಿಸಿ ಹಾಜರುಪಡಿಸಿದಾಗ ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
Next Story