ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ ವಂಚನೆ; ಪ್ರಕರಣ ದಾಖಲು

ಉಳ್ಳಾಲ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು ಗೂಗಲ್ ಪೇ ಮೂಲಕ 12 ಮಂದಿಯಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿರುವ ಕುರಿತು ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಂಚನೆ ನಡೆಸಿದ ಲೀನಾ ಲೋಬೊ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಆಕೆ ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡಿಸ್, ಸಚಿನ್ ಪ್ರಸನ್ನ, ವಿನಯ್ ಜೋಯ್ ಆಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿಸೋಜ, ನಾಗೇಂದ್ರ ಗಣಪತಿ, ಅವಿಶ್ ಡಿಸೋಜ, ಜೋಯ್ ಸನ್ ಲೂವಿಸ್ ಎಂಬವರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿರುವುದಾಗಿ ದೂರಲಾಗಿದೆ.
ಲೀನಾ ಫೆ.2ರಿಂದ ಮಾ.12ರ ವರೆಗೆ ಹಂತ ಹಂತವಾಗಿ ಗೂಗಲ್ ಪೇ ಮೂಲಕ ಒಟ್ಟು ರೂ. 2,82,000/- ಹಣವನ್ನು ಪಡೆದು, ನಂತರ ಉದ್ಯೋಗವನ್ನು ಕೊಡಿಸದೆ ವಂಚಿಸಿದ್ದಾರೆ. ದೂರುದಾರರು ಹಣವನ್ನು ವಾಪಸ್ ಕೇಳಿದರೂ ಹಿಂತಿರುಗಿಸದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತರು ದೂರು ನೀಡಿದ್ದಾರೆ.