ಬಂಟ್ವಾಳ: ವಿವಾಹಿತ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ.
ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
ಬುಧವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Next Story