ಸೋಮೇಶ್ವರ: ಬಂದೋಬಸ್ತ್ನಲ್ಲಿದ್ದ ಹೆಡ್ ಕಾನ್ಸ್ಟೇಬಲ್ಗೆ ಟೆಂಪೊ ಢಿಕ್ಕಿ

ಉಳ್ಳಾಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ಬಂದೋಬಸ್ತ್ನಲ್ಲಿದ್ದ ಹೆಡ್ ಕಾನ್ಸ್ಟೇಬಲ್ ಅವರಿಗೆ ಟೆಂಪೊ ಒಂದು ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಿನ್ನೆ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅವರ ಭೇಟಿಯ ಹಿನ್ನೆಲೆಯಲ್ಲಿ ಆಡಂಕುದ್ರುವಿನಲ್ಲಿ ಕಂಕನಾಡಿ ಸಂಚಾರಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ ಹೆಗಡೆ ಬಂದೋಬಸ್ತ್ ಕರ್ತವ್ಯದಲ್ಲಿದ್ದು ವಾಹನಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದರು.
ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ಕಳೆದಕೊಂಡು ಮಂಜುನಾಥ ಅವರಿಗೆ ಢಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story