ಒಂದು ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟ ಮಾಡಲು ವಾಟ್ಸ್ಯಾಪ್ ಗ್ರೂಪ್ ರಚಿಸಿದ ಮೂವರ ಬಂಧನ

ಜಮ್ಶೆದ್‌ಪುರ್: ಸಾಮಾಜಿಕ ಜಾಲತಾಣದ ಮೂಲಕ ಒಂದು ನಿರ್ದಿಷ್ಟ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶದೊಂದಿಗೆ ವಾಟ್ಸ್ಯಾಪ್ ಗ್ರೂಪ್ ರಚಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಜಮ್ಶೆದ್‌ಪುರದ ಶಾಸ್ತ್ರಿನಗರ ಪ್ರದೇಶದಲ್ಲಿ ರವಿವಾರ ಧಾರ್ಮಿಕ ಧ್ವಜವೊಂದಕ್ಕೆ ಹಾನಿಯೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು.
ಘಟನೆ ತನಿಖೆ ನಡೆಸಿದ ಪೊಲೀಸರಿಗೆ ಕೆಲ ಜನರು ವಾಟ್ಸ್ಯಾಪ್ ಗುಂಪು ರಚಿಸಿ ಒಂದು ನಿರ್ದಿಷ್ಟ ಧರ್ಮದ ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಯೋಜಿಸಿದ್ದರೆಂದು ತಿಳಿದು ಬಂದಿತ್ತು.
ಇದರ ಬೆನ್ನಲ್ಲೇ ಕಾರ್ಯಾಚರಣೆ ನಡೆದು ಗ್ರೂಪ್ ಅಡ್ಮಿನ್ ಮತ್ತು ಇಬ್ಬರು ಸದಸ್ಯರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಧತ್‌ಕಿಡಿಹ್ ಹರಿಜನ್ ಭಟಿ ಪ್ರದೇಶದವರಾಗಿದ್ದಾರೆ. ಎಲ್ಲರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
Next Story