ಕಾಸರಗೋಡು: 67 ಲಕ್ಷ ರೂ. ಅಕ್ರಮ ಹಣ ಸಾಗಾಟ; ಆರೋಪಿಯ ಬಂಧನ

ಕಾಸರಗೋಡು : ಸುಮಾರು 67 ಲಕ್ಷ ರೂ. ದಾಖಲೆ ರಹಿತ ಹಣ ಸಾಗಾಟ ಮಾಡುತ್ತಿದ್ದ ಓರ್ವನನ್ನು ಡಿ ವೈ ಎಸ್ಪಿ ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸಿದೆ.
ಬಂಧಿತ ವ್ಯಕ್ತಿಯನ್ನು ಪುಂಜಾವಿ ಯ ಹಾರಿಸ್ (39) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಕಲ್ಲೂರಾವಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ಸ್ಕೂಟರನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದೆ ೆಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Next Story





