ಸಂಪಾಜೆ | ಸರ್ಕಾರಿ ಬಸ್, ಕಾರು ಢಿಕ್ಕಿ: ಆರು ಮಂದಿ ಮೃತ್ಯು

ಸಂಪಾಜೆ , ಎ.14 : ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಸಂಪಾಜೆಯಲ್ಲಿ ಶುಕ್ರವಾರ ವರದಿಯಾಗಿದೆ.
ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ.
ಕಾರಿನಲ್ಲಿ ಮಂಡ್ಯ ಜಿಲ್ಲೆಯ 8 ಮಂದಿ ಪ್ರಯಾಣಿಸುತ್ತಿದ್ದು, ಕಾರಿನಲ್ಲಿದ್ದ 3 ಮಕ್ಕಳು, ಎರಡು ಮಹಿಳೆಯರು ಹಾಗು ಒಬ್ಬರು ಪುರುಷ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ತೀವ್ರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ಲಭ್ಯವಾಗಿಲ್ಲ.