ನನಗೆ, ಜಗದೀಶ್ ಶೆಟ್ಟರ್ ಗೆ ರಾಜಕೀಯ ನಿವೃತ್ತಿಯಾಗುವಂತೆ ವರಿಷ್ಠರ ಸೂಚನೆ: ಕೆ.ಎಸ್. ಈಶ್ವರಪ್ಪ
ಬಳ್ಳಾರಿ: ತಮಗೆ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಶುಕ್ರವಾರ ಬಳ್ಳಾರಿ ನಗರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, 'ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ತಮಗೆ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ದೂರವಾಣಿ ಕರೆ ಮಾಡಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವಂತೆ ಸೂಚಿಸಿದ್ದಾರೆ' ಎಂದು ತಿಳಿಸಿದರು.
'ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪಮುಖ್ಯಮಂತ್ರಿಯ ವರೆಗೂ ಪಕ್ಷ ನನಗೆ ಸ್ಥಾನಮಾನ ಕೊಟ್ಟಿದೆ. ಹೀಗಾಗಿ ಪಕ್ಷದ ಸೂಚನೆ ಹಿನ್ನೆಲೆಯಲ್ಲಿ ನಾನು ಪಕ್ಷ ರಾಜಕಾರಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ' ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಬಿಎಸ್ ವೈ ಭೇಟಿಯಾದ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್
Next Story