Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗೌಜಿ ಗಮ್ಮತ್ ತುಳು ಸಿನಿಮಾ...

ಗೌಜಿ ಗಮ್ಮತ್ ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ

14 April 2023 7:41 PM IST
share
ಗೌಜಿ ಗಮ್ಮತ್ ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ

ಮಂಗಳೂರು :  ಮೋವಿನ್ ಫಿಲಂಸ್ ಲಾಂಛನದಲ್ಲಿ ತಯಾರಾದ ಗೌಜಿಗಮ್ಮತ್ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ಖ್ಯಾತ ರಂಗಕರ್ಮಿ, ಚಲನ ಚಿತ್ರ ನಿರ್ದೇಶಕ  ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, ನಿರ್ಮಾಪಕರಾದ ಮೋಹನ್ ಭಟ್ಕಳ್ ಹಾಗೂ ವಿನಾಯಕ ತೀರ್ಥಹಳ್ಳಿ ಅವರ ಶ್ರಮ ಗೌಜಿ ಗಮ್ಮತ್ ಸಿನಿಮಾ ಯಶಸ್ಸು ಕಾಣುವ ಮೂಲಕ ಇನ್ನಷ್ಟು ಮಂದಿಗೆ ಪ್ರೇರಣೆಯಾಗಲಿ. ಸಿನಿಮಾವನ್ನು ತುಳುನಾಡಿನ ಸರ್ವಧರ್ಮದ ಜನತೆ ಇಷ್ಟಪಡುವ ಮೂಲಕ ಸಿನಿಮಾ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.

ಬಳಿಕ ಮಾತಾಡಿದ ಅರವಿಂದ್ ಬೋಳಾರ್ ಅವರು ಶ್ರಮವಹಿಸಿ ನಿರ್ಮಾಣಗೊಂಡು ಬಿಡುಗಡೆಯಾಗುತ್ತಿರುವ ಈ ಸಿನಿಮಾ ಗೆಲ್ಲಬೇಕು. ಇದರಿಂದ ತುಳು ಚಿತ್ರ ನಿರ್ಮಾಪಕರಿಗೆ ಇನ್ನಷ್ಟು ಸದಭಿರುಚಿಯ ಸಿನಿಮಾ ಮಾಡಲು ಧೈರ್ಯ ಬರುತ್ತದೆ ಎಂದರು.

ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ಗೌಜಿ ಗಮ್ಮತ್ ಸಿನಿಮಾವನ್ನು ಎಲ್ಲಾ ತುಳುವರು ನೋಡಿ ಚಿತ್ರತಂಡವನ್ನು ಆಶೀರ್ವದಿಸಬೇಕು. ತುಳು ಚಿತ್ರರಂಗದ ಎಲ್ಲರೂ ಒಗ್ಗಟ್ಟಾದರೆ ನಮ್ಮ ನೆಲದ ತುಳು ಸಿನಿಮಾ ಯಶಸ್ಸು ಕಾಣಲಿದೆ ಎಂದರು.

ಅರ್ಜುನ್ ಕಾಪಿಕಾಡ್, ಪ್ರಕಾಶ್ ತೂಮಿನಾಡ್, ನಿರ್ಮಾಪಕರಾದ ವಿನಾಯಕ ತೀರ್ಥಹಳ್ಳಿ, ಮೋಹನ್ ಭಟ್ಕಳ್, ನಿರ್ದೇಶಕ ಎಜೆ ಮಣಿ ಕಾರ್ತಿಕೇಯನ್, ಹಿರಿಯ ನಟಿ ಜಯಶೀಲ, ಜಗನ್ನಾಥ ಶೆಟ್ಟಿ ಬಾಳ, ಮೋಹನ್ ಕೊಪ್ಪಲ, ಪ್ರಭಾಕರ ಬ್ರಹ್ಮಾವರ್, ರಾಮದಾಸ್ ಸಸಿಹಿತ್ಲು, ಗಣೇಶ್ ಕಾಮತ್, ಸಂದೀಪ್ ಬೆದ್ರ, ನಾಯಕ ನಟ ಕರ್ಣ ಉದ್ಯಾವರ, ನಟಿ ಸ್ವಾತಿ ಪ್ರಕಾಶ್ ಶೆಟ್ಟಿ, ಕಿಶೋರ್ ಮೂಡಬಿದ್ರೆ, ಚೇತಕ್ ಪೂಜಾರಿ, ಡಿ ಬಿ ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು. ವೀಕ್ಷಿತ್ ಕೆಮ್ತೂರ್ ಕಾರ್ಯಕ್ರಮ ನಿರ್ವಹಿಸಿದರು.

ಗೌಜಿ ಗಮ್ಮತ್ ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಉಡುಪಿಯಲ್ಲಿ ಕಲ್ಪನ, ಮಣಿಪಾಲದಲ್ಲಿ ಭಾರತ್ ಸಿನಿಮಾ, ಐನಾಕ್ಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾ, ಸುರತ್ಕಲ್ ನಲ್ಲಿ ನಟರಾಜ್, ಸಿನಿ ಗ್ಯಾಲಕ್ಸಿ, ಪುತ್ತೂರಿನಲ್ಲಿ ಅರುಣಾ, ಭಾರತ್ ಸಿನಿಮಾ, ಮೂಡಬಿದ್ರೆಯಲ್ಲಿ ಅಮರಶ್ರೀ, ಕಾರ್ಕಳದಲ್ಲಿ ರಾಧಿಕಾ,  ಮೊದಲಾದ ಕಡೆಗಳಲ್ಲಿ ಸಿನಿಮಾ ತೆರೆ ಕಂಡಿದೆ. 

share
Next Story
X