Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಬೇಸಿಗೆ ಅವಧಿಯಲ್ಲಿ ಪ್ರಾಣಿ ಪಕ್ಷಿಗಳ...

ಬೇಸಿಗೆ ಅವಧಿಯಲ್ಲಿ ಪ್ರಾಣಿ ಪಕ್ಷಿಗಳ ನಿರ್ವಹಣೆಯ ಟಿಪ್ಸ್

14 April 2023 10:05 PM IST
share
ಬೇಸಿಗೆ ಅವಧಿಯಲ್ಲಿ ಪ್ರಾಣಿ ಪಕ್ಷಿಗಳ ನಿರ್ವಹಣೆಯ ಟಿಪ್ಸ್

ಮಂಗಳೂರು : ಕರಾವಳಿ ಪ್ರದೇಶದಲ್ಲಿ ಪ್ರಸಕ್ತ ಬೇಸಿಗೆ ಅವಧಿಯಲ್ಲಿ ಉಷ್ಣಾಂಶ ಏರಿಕೆಯಾಗಿರುವುದರಿಂದ ಎಲ್ಲಾ ಪ್ರಾಣಿ, ಪಕ್ಷಿಗಳಲ್ಲಿ ಅದರಲ್ಲಿಯೂ ಉತ್ಪಾದಕ ಪ್ರಾಣಿಗಳಾದ ದನ ಹಾಗೂ ಮಾಂಸದ ಕೋಳಿಗಳ ಮೇಲೆ ತುಂಬಾ ಒತ್ತಡವನ್ನುಂಟು ಮಾಡುತ್ತದೆ.

ಬೇಸಿಗೆ ಅವಧಿಯಲ್ಲಿ ದನಗಳಲ್ಲಿ ಉಷ್ಣಾಂಶದ ಒತ್ತಡದಿಂದ ಆಹಾರ ತಿನ್ನುವ ಪ್ರಮಾಣ ಕಡಿಮೆಯಾಗಿ ಹಾಲಿನ ಇಳುವರಿ ಕಡಿಮೆಯಾಗುತ್ತಿದೆ. ಹೀಗೆ ಹೆಚ್ಚಿನ ಬಿಸಿಲಿನ ತಾಪಮಾನದಿಂದಾಗಿ ಮಾಂಸದ ಕೋಳಿಗಳ ತೂಕ ಬಾರದೆ ಇರಬಹುದು ಮತ್ತು ಉಷ್ಣಾಂಶದ ಪ್ರಮಾಣ 36 ಡಿಗ್ರಿ ಹೆಚ್ಚಾದಾಗ ಕೋಳಿಗಳು ಸಾಯುವ ಸಾಧ್ಯತೆ ಇರುತ್ತದೆ. ಅಷ್ಟಲ್ಲದೆ ಉಷ್ಣಾಂಶದ ಒತ್ತಡದಲ್ಲಿ ಬಳಲಿದ ಪ್ರಾಣಿ ಪಕ್ಷಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ದನಗಳಲ್ಲಿ ಕೆಚ್ಚಲು ಬಾವು, ಕೋಳಿಗಳಲ್ಲಿ ಕೊಕ್ಕರೆ ರೋಗಗಳು ಕಂಡು ಬರುತ್ತವೆ.

ಜಾನುವಾರುಗಳ ನಿರ್ವಹಣೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು

ಬೇಸಿಗೆಯಲ್ಲಿ ಉಷ್ಣತೆ ಹೆಚ್ಚಾಗುವುದರಿಂದ ದನಗಳನ್ನು ಬೆಳಗ್ಗೆ ಅಥವಾ ಸಂಜೆ ಮೇಯಲು ಹೊರಗಡೆ ಬಿಡಬೇಕು. ಯಾವುದೇ ಕಾರಣಕ್ಕೂ ಬೆಳಗ್ಗೆ 11ರಿಂದ ಸಂಜೆ 4 ಗಂಟೆ ಅವಧಿಯಲ್ಲಿ ಜಾನುವಾರುಗಳನ್ನು ಹೊರಗಡೆ ಬಿಡಬಾರದು. ದಿನದ 24 ಗಂಟೆಯೂ ತಂಪಾದ ನೀರು ನೀಡಬೇಕು. ನೀರಿನ ಕೊರತೆ ಕಂಡುಬಂದರೆ ಸ್ಥಳೀಯ ಸಂಸ್ಥೆಗಳ ಮೂಲಕ ಪಡೆದುಕೊಳ್ಳುವುದು. ಜಾನುವಾರುಗಳನ್ನು ನೆರಳಿನಲ್ಲಿ ಮಾತ್ರ ಹೊರಗಡೆ ಕಟ್ಟಬೇಕು. ಜಾನುವಾರು ಶೆಡ್ ಮೇಲೆ ತೆಂಗಿನ ಅಥವಾ ಅಡಿಕೆ ಗರಿ ಹಾಕಿ ಸ್ಪಿಂಕ್ಲರ್ ನಲ್ಲಿ ನೀರು ಚಿಮ್ಮಿಸಬಹುದು ಅಥವಾ ಬಿಳಿ ಬಣ್ಣದ ಪೇಂಟ್ ಹಾಕಬಹುದು. ಶೆಡ್ ಒಳಗಡೆ ಫ್ಯಾನ್ಗಳನ್ನು ಅಳವಡಿಸಿದ್ದಲ್ಲಿ ಉಷ್ಣತೆ ಪ್ರಮಾಣ ತಗ್ಗಿಸಬಹುದಾಗಿದೆ. ಒದ್ದೆಯಾದ ಗೋಣಿ ಚೀಲಗಳನ್ನು ಶೆಡ್ ಸುತ್ತಲೂ ಕಟ್ಟಬಹುದು. ಪ್ರತಿ ಗಂಟೆಗೊಮ್ಮೆ ಜಾನುವಾರುಗಳ ಮೈ ಮೇಲೆ 1ರಿಂದ 4 ನಿಮಿಷ ನೀರು ಚಿಮುಕಿಸುತ್ತಿರಬೇಕು.

ಜಾನುವಾರುಗಳಿಗೆ ಹೆಚ್ಚಿನ ಆಹಾರವನ್ನು ಬೆಳಿಗ್ಗೆ ಬೇಗನೆ ಮತ್ತು ರಾತ್ರಿ ಹೊತ್ತಿನಲ್ಲಿ ತಿನ್ನಿಸುವುದು ಉತ್ತಮ. ಜಾನುವಾರುಗಳಿಗೆ ಅವುಗಳ ಹಾಲಿನ ಇಳುವರಿಗನುಗುಣವಾಗಿ 20 ರಿಂದ 100 ಗ್ರಾಂ ಲವಣ ಮಿಶ್ರಣವನ್ನು ಪ್ರತಿ ದಿನ ನೀಡಬೇಕು. ಜಾನುವಾರುಗಳಲ್ಲಿ ರೋಗ ಲಕ್ಷಣ ಕಂಡುಬಂದಲ್ಲಿ ತಕ್ಷಣ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಭೇಟಿ ಮಾಡಬೇಕು.

ಮಾಂಸದ ಕೋಳಿಗಳ ಸಾಕಾಣಿಕೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು

ಕೋಳಿ ಮನೆಗಳಲ್ಲಿ, ದಿನದ 24 ಗಂಟೆಗಳ ಕಾಲ ತರವಾದ ಮತ್ತು ಶುಚಿಯಾದ ನೀರನ್ನು ಒದಗಿಸಬೇಕು. ಒಂದು ಗಂಟೆ ನೀರು ಇಲ್ಲದಿದ್ದರೆ ಕೋಳಿಗಳು ಸಾವನ್ನಪ್ಪಬಹುದು. ಚೆನ್ನಾಗಿ ಗಾಳಿಯಾಡಲು ಅನುಕೂಲವಾಗುವಂತೆ ಎಲ್ಲಾ ತಡೆಗಳನ್ನು ತೆಗೆಯಬೇಕು. ಕೋಳಿ ಮನೆ ಮಾಡಿನ ಮೇಲೆ ಸುಣ್ಣ ಬಳಿಯಬೇಕು ಅಥವಾ ಹುಲ್ಲು, ಅಡಿಕೆ, ತೆಂಗಿನ ಗರಿಗಳಿಂದ ಹೊದಿಸಬೇಕು. ಅನುಕೂಲವಿದ್ದರೆ ಕೋಳಿ ಮನೆಯ ಮಾಡಿನ ಮೇಲೆ ನೀರು ಸಿಂಪಡಿಸಬೇಕು. ವಿಟಮಿನ್ ಸಿ ಮತ್ತು ಇತರೆ ಎಲೆಕ್ಟ್ರೋಲೈಟ್  ಗಳನ್ನು ಉಪಯೋಗಿಸುವುದರಿಂದ ಕೋಳಿಗಳ ಮೇಲೆ ಆಗುವ ಬಿಸಿಲಿನ ಒತ್ತಡವನ್ನು ಕಡಿಮೆ ಮಾಡಬಹುದು ಅಥವಾ ಅಡುಗೆ ಸೋಡ 1ಗ್ರಾಂ ಗೆ 5ಲೀಟರ್ ನೀರಿಗೆ ಬೆರೆಸಿ ಕೋಳಿಗಳಿಗೆ ಕುಡಿಯಲು ನೀಡಬೇಕು.

ಕೋಳಿ ಮನೆಗಳಲ್ಲಿ ನೀರಿನ ಟ್ಯಾಂಕಿನ ಹೊರಮೈಗೆ ಬಿಳಿಬಣ್ಣ ಬಳಿಯಬೇಕು ಅಥವಾ ಗೋಣಿಯನ್ನು ಸುತ್ತಲೂ ಕಟ್ಟಿ ದಿನಕ್ಕೆರಡು ಬಾರಿ ನೀರಿನಿಂದ ಒದ್ದೆ ಮಾಡಬೇಕು ಅಥವಾ ಚಪ್ಪರ ಹಾಕಬೇಕು. ಬೇಸಿಗೆ ಅವಧಿಯಲ್ಲಿ ನೀರಿನಲ್ಲಿ ಹಾನಿಕಾರಕ ಸೂಕ್ಷ್ಮ ಜೀವಿಗಳು ಹೆಚ್ಚಿರುವುದರಿಂದ ಸೋಂಕು ನಿವಾರಕಗಳನ್ನು ಉಪಯೋಗಿಸಬೇಕು. ಅತೀ ಉಷ್ಣ ಹಾಗೂ ಮೋಡ ಕವಿದ ವಾತಾವರಣ ಇದ್ದಾಗ ಮಧ್ಯಾಹ್ನ 1 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಕೋಳಿಗಳ ಮೇಲೆ ನಿಗಾ ವಹಿಸಬೇಕು. ಯಾವುದೇ ಕಾರಣಕ್ಕೂ ಕೋಳಿ ಮನೆಗಳ ಒಳಗೆ ಬಿಸಿಲು ಬೀಳದಂತೆ ಎಚ್ಚರ ವಹಿಸಬೇಕು. ಬೇಸಿಗೆಯಲ್ಲಿ ಕೋಳಿಗಳು 20 ದಿನದ ನಂತರ, ಆ ದಿನಕ್ಕೆ ನಿಗದಿಪಡಿಸಿದ ಕೋಳಿ ಆಹಾರ ತಿನ್ನುವ ಸಾಧ್ಯತೆ ಕಡಿಮೆ ಆದ್ದರಿಂದ ರೈತರು ದಿನದ ತಂಪಾದ ಸಮಯ ಅಂದರೆ ರಾತ್ರಿ 12 ಗಂಟೆ ತನಕ ಅಥವಾ ಬೆಳಗ್ಗೆ 4 ರಿಂದ 8 ಗಂಟೆ ಅವಧಿಯಲ್ಲಿ ಕೋಳಿಗಳಿಗೆ ಅಹಾರ ನೀಡಬೇಕು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X