Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಕಾಂಗ್ರೆಸ್ ಅಧಿಕಾರಕ್ಕೆ’ ಬಂದರೆ...

‘ಕಾಂಗ್ರೆಸ್ ಅಧಿಕಾರಕ್ಕೆ’ ಬಂದರೆ ಮೀಸಲಾತಿಯ ಪ್ರಮಾಣ ಹೆಚ್ಚಳಕ್ಕೆ ಕ್ರಮ: ಸಿದ್ದರಾಮಯ್ಯ

14 April 2023 10:49 PM IST
share
‘ಕಾಂಗ್ರೆಸ್ ಅಧಿಕಾರಕ್ಕೆ’ ಬಂದರೆ ಮೀಸಲಾತಿಯ ಪ್ರಮಾಣ ಹೆಚ್ಚಳಕ್ಕೆ ಕ್ರಮ: ಸಿದ್ದರಾಮಯ್ಯ

ಬೆಂಗಳೂರು, ಎ. 14: ‘ಮುಸ್ಲಿಮ್ ಸಮುದಾಯದ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತ. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ‘ಹಿಂದೂ’ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರಕಾರ ಈಗಲಾದರೂ ಹಿಂಪಡೆದು ಮಾನ ಉಳಿಸಿಕೊಳ್ಳಬೇಕು’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ‘ಮುಸ್ಲಿಮ್ ಮೀಸಲಾತಿ ರದ್ದತಿ ಬಗ್ಗೆ ಕರ್ನಾಟಕ ಸರಕಾರ ಕೈಗೊಂಡಿರುವ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ಯನ್ನು ಆಧರಿಸಿದೆ. ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಬುನಾದಿಯೇ ಅತ್ಯಂತ ಅಸ್ಥಿರವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ರಾಜ್ಯ ಸರಕಾರ ತಲೆ ತಗ್ಗಿಸುವಂತೆ ಮಾಡಿದೆ’ ಎಂದು ವಿಶ್ಲೇಷಿಸಿದ್ದಾರೆ.

‘ಮುಸ್ಲಿಮರು ಕೇವಲ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಪರಿಗಣಿಸಿತ್ತು ಎಂಬ ಕೇಂದ್ರ ಸರಕಾರದ ಸಾಲಿಸಿಟರ್ ಜನರಲ್ ಹೇಳಿಕೆ ಸಂಪೂರ್ಣ ತಪ್ಪು ಮಾಹಿತಿಯಾಗಿದೆ. ‘ಮುಸ್ಲಿಂಮರು ಸಾಮಾಜಿಕವಾಗಿಯೂ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಹೇಳಿತ್ತು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಯನ ಆಧರಿತ ವರದಿ, ಅಂಕಿ-ಅಂಶಗಳ ಸಂಗ್ರಹ ಸೇರಿ ಯಾವುದೇ ತಯಾರಿ ಇಲ್ಲದೆ ಅವಸರದಿಂದ ಮುಸ್ಲಿಮ್ ಮೀಸಲಾತಿ ರದ್ದುಪಡಿಸಿರುವುದಕ್ಕೆ ಚುನಾವಣಾ ಲಾಭದ ದುರುದ್ದೇಶ ಬಿಟ್ಟರೆ ಬೇರೆ ಕಾರಣಗಳಿರಲಿಲ್ಲ’ ಎಂದು ಅವರು ಟೀಕಿಸಿದ್ದಾರೆ.

‘ಮುಸ್ಲಿಮ್ ಮೀಸಲಾತಿಯನ್ನು ರದ್ದುಗೊಳಿಸಿ ಉಳಿಸಿಕೊಂಡ ಶೇ.4ರಷ್ಟು ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿಕೆ ಮಾಡಿರುವುದರಿಂದ ಮುಸ್ಲಿಮ್ ಮೀಸಲಾತಿ ರದ್ದತಿ ಆದೇಶ ರದ್ದಾದರೆ ಆ ಎರಡೂ ಸಮುದಾಯಗಳಿಗೆ ನೀಡಿರುವ ಹೆಚ್ಚುವರಿ ಮೀಸಲಾತಿಯೂ ರದ್ದಾಗುತ್ತದೆ. ಒಳ ಮೀಸಲಾತಿ ಮತ್ತು ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ವಿರೋಧ ಇಲ್ಲ. ಆದರೆ, ಕಲ್ಪಿತ ಸುಳ್ಳುಗಳ ಮೂಲಕ ಬಿಜೆಪಿ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯಲು ಹೊರಟಿದೆ’ ಎಂದು ಸಿದ್ದರಾಮಯ್ಯ ದೂರಿದ್ದಾರೆ.

‘ಒಟ್ಟು ಮೀಸಲಾತಿ ಪ್ರಮಾಣವನ್ನು ಕನಿಷ್ಠ ಶೇ.75ಕ್ಕೆ ಹೆಚ್ಚಿಸಿ ಪ್ರತಿಯೊಂದು ಜಾತಿಗಳಿಗೆ ಅವುಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವುದೊಂದೇ ಈಗಿನ ಮೀಸಲಾತಿ ವಿವಾದಕ್ಕೆ ಶಾಶ್ವತ ಪರಿಹಾರ. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿ ಎಲ್ಲ ಜಾತಿ ಜನರಿಗೆ ಅವರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಲು ಖಂಡಿತ ಕ್ರಮಕೈಗೊಳ್ಳುತ್ತೇವೆ. ಯಾರ ಮೀಸಲಾತಿಯನ್ನೂ ರದ್ದುಗೊಳಿಸದೆ ಸರ್ವಸಮ್ಮತ ಪರಿಹಾರ ನೀಡುತ್ತೇವೆ’ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

‘ಮೀಸಲಾತಿಗೆ ಶೇ.50ರ ಮಿತಿ ಎನ್ನುವುದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗವೇ ಹೊರತು ಅದು ಸಾಂವಿಧಾನಿಕವಾದುದೇನಲ್ಲ. ವಿಶೇಷ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬಹುದೆಂದು ಅದೇ ಆದೇಶದಲ್ಲಿ ಹೇಳಲಾಗಿದೆ. ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಆಯೋಗ ಮನೆ-ಮನೆಗೆ ತೆರಳಿ ವೈಜ್ಞಾನಿಕವಾಗಿ ನಡೆಸಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯ ಸರಕಾರದ ಕೈಯಲ್ಲಿದೆ. ಆ ವರದಿ ಆಧಾರದಲ್ಲಿ ಮೀಸಲಾತಿಯನ್ನು ಹೆಚ್ಚಿಸಿದರೆ ನ್ಯಾಯಾಲಯವು ಮಾನ್ಯತೆ ನೀಡಲಿದೆ’ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

‘ಕೇಂದ್ರ ಸರಕಾರ ಈಗಾಗಲೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿ ಶೇ.50ರ ಮೀಸಲಾತಿ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ಅಗತ್ಯ ತಿದ್ದುಪಡಿ ತರಬೇಕು’

-ಸಿದ್ದರಾಮಯ್ಯ ವಿಪಕ್ಷ ನಾಯಕ

share
Next Story
X