ಕಾರು ಅಪಘಾತ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಾಯ

ಕಲಬುರಗಿ, ಎ.15: ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರ ಕಾರು ಶುಕ್ರವಾರ ತಡರಾತ್ರಿ ಅಪಘಾತಕ್ಕೀಡಾಗಿದ್ದು, ಬಾಬುರಾವ್ ಗಾಯಗೊಂಡಿದ್ದಾರೆ.
ನಗರದ ಆಕಾಶವಾಣಿ ಕೇಂದ್ರದ ಬಳಿ ತಡರಾತ್ರಿ ಎರಡು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ್ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿಕೊಂಡು ಅವರು ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಕಾರಿನಲ್ಲಿದ್ದ ಚಿಂಚನಸೂರ್ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯರು ನಗರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
Next Story





