ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

ಚಿಕ್ಕಬಳ್ಳಾಪುರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ (54) ಹೃದಯಾಘಾತದಿಂದ ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ.
ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 02:20ಕ್ಕೆ ಆಸ್ವತ್ರೆಯಲ್ಲಿ ಕೊನೆಯುಸಿರೆಳೆದರು.
ಮಾಜಿ ಶಾಸಕ ವೆಂಕಟಸ್ವಾಮಿಯವರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ. ಸ್ವಗ್ರಾಮ ಸಾದಹಳ್ಳಿಯ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಾಜಿ ಶಾಸಕ ವೆಂಕಟಸ್ವಾಮಿ ಅವರು 2008ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದರು. ಇದೀಗ 2023 ರ ಚುನಾವಣೆಗೂ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಟಿಕೆಟ್ ಗಾಗಿ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮಾಜಿ ಶಾಸಕ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ
Next Story