ಜಗದೀಶ್ ಶೆಟ್ಟರ್ ನಿವಾಸಕ್ಕೆ ಪ್ರಹ್ಲಾದ್ ಜೋಶಿ ಭೇಟಿ; ಮನವೊಲಿಕೆಗೆ ಯತ್ನ

ಹುಬ್ಬಳ್ಳಿ, ಎ.15: ಟಿಕೆಟ್ ಘೋಷಣೆಯಾಗದ ಹಿನ್ನೆಲೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಶನಿವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದರು.
ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ಶೆಟ್ಟರ್ ನಿವಾಸಕ್ಕೆ ಆಗಮಿಸಿದ ಜೋಶಿ, ಪಕ್ಷ ತೊರೆಯದಂತೆ ಶೆಟ್ಟರ್ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆನ್ನಲಾಗಿದೆ.
ಟಿಕೆಟ್ ಘೋಷಿಸದಿದ್ದರೆ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಜೆಪಿ ವರಿಷ್ಠರಿಗೆ ಶೆಟ್ಟರ್ ಗಡುವು ವಿಧಿಸಿದ್ದರು. ಅದರಂತೆ ಇಂದು ಅಭಿಮಾನಿಗಳ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ಕರೆದು ತನ್ನ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.

Next Story





