ಬಿಹಾರ: ನಕಲಿ ಮದ್ಯ ಸೇವಿಸಿ 5 ಮಂದಿ ಸಾವು, 12 ಮಂದಿ ಗಂಭೀರ

ಪಾಟ್ನಾ: ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಎಂದು India Today ವರದಿ ಮಾಡಿದೆ.
ರಾಜ್ಯದ ಮೋತಿಹಾರಿ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದಲ್ಲಿ ಈ ಸಾವು ಸಂಭವಿಸಿದೆ.
ಇನ್ನೂ ಹನ್ನೆರಡು ಜನರು ಗಂಭೀರ ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಎಪ್ರಿಲ್ 2016 ರಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರಕಾರವು ರಾಜ್ಯದಲ್ಲಿ ಮದ್ಯ ಮಾರಾಟ ಹಾಗೂ ಸೇವನೆಯ ಮೇಲೆ ಸಂಪೂರ್ಣ ನಿಷೇಧವನ್ನು ಹೇರಿತು. ಇದು ಗಮನಾರ್ಹ ಸಂಖ್ಯೆಯ ಮಹಿಳಾ ಮತದಾರರನ್ನು ಗೆದ್ದುಕೊಂಡಿತ್ತು.
ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಕಾಳಸಂತೆಯಲ್ಲಿ ಮದ್ಯ ಮಾರಾಟ ನಡೆಯುತ್ತಿದ್ದು, ಸ್ಥಳೀಯವಾಗಿ ತಯಾರಿಸಿದ ನಕಲಿ ಮದ್ಯದ ಸೇವನೆಯಿಂದ ಸಾವುಗಳು ಸಂಭವಿಸುತ್ತಲೇ ಇವೆ.
Next Story





