ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು
ಬೆಂಗಳೂರು, ಎ.15: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‍ಡಿಎಲ್)ನಿಯಮಿತಕ್ಕೆ ಕಚ್ಚಾ ಸಾಮಗ್ರಿ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಎ.10ರಂದು ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನಗರದ ಜನಪ್ರತಿನಿಧಿಗಳ ಕೋರ್ಟ್, ಎ.15ಕ್ಕೆ ಆದೇಶ ಕಾಯ್ದಿರಿಸಿತ್ತು. ಅದರಂತೆ ಇಂದು ನ್ಯಾಯಾಧೀಶರಾದ ಬಿ.ಜಯಂತಕುಮಾರ್ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಪ್ರಕಟಿಸಿದರು.
5 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್, ಇಬ್ಬರ ಭದ್ರತೆ, ಮೂರು ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು. ಪಾಸ್‌ಪೋರ್ಟ್ ಅನ್ನು ತನಿಖಾಧಿಕಾರಿ ವಶಕ್ಕೆ ನೀಡಲು ನ್ಯಾಯಾಲಯ ಆದೇಶಿಸಿದೆ.
Next Story