ಮಂಗಳೂರು ನಗರ ದಕ್ಷಿಣದಿಂದ ಜೆ.ಆರ್.ಲೋಬೊ, ಪುತ್ತೂರಿನಲ್ಲಿ ಅಶೋಕ್ ಕುಮಾರ್ ರೈಗೆ ಟಿಕೆಟ್
ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ

ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ
ಮಂಗಳೂರು, ಎ.15: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಿದೆ.
ಮಂಗಳೂರು ನಗರ ದಕ್ಷಿಣ ಕ್ಷೇತ್ರಕ್ಕೆ ಮಾಜಿ ಶಾಸಕ ಜೆ.ಆರ್.ಲೋಬೋ ಅವರನ್ನು ಮತ್ತೆ ಕಣಕ್ಕಿಳಿಸಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಪುತ್ತೂರು ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರ ಆಪ್ತ ಹಾಗೂ ಬಿಜೆಪಿಯಿಂದ ಪಕ್ಷಾಂತರಗೊಂಡಿರುವ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.
ಮಂಗಳೂರು ನಗರ ಉತ್ತರ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ. ಮಾಜಿ ಶಾಸಕ ಮೊಯ್ದಿನ್ ಬಾವಾ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಧ್ಯೆ ಟಿಕೆಟ್‌ಗಾಗಿ ಪೈಪೋಟಿ ಮುಂದುವರಿದಿರುವುದಾಗಿ ತಿಳಿದು ಬಂದಿದೆ.
Next Story





